ಶಿವಮೊಗ್ಗ,ಜ.೧೭: ಶಂಕರ ಕಣ್ಣಿನ ಆಸ್ಪತ್ರೆ ಸಮುದಾಯ ಆರೋಗ್ಯ ಕೇಂದ್ರ, ಆಯನೂರು ತಾಲ್ಲೂಕು ಬ್ರಾಹ್ಮಣ ಸೇವಾ ಸಂಘ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಇವರ
ಸಂಯುಕ್ತಾಶ್ರಯದಲ್ಲಿ ಜ.೨೦ರಂದು ಆಯನೂರಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಉಚಿತ ನೇತ್ರಾ ತಪಾಸಣಾ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ ಆಯೋಜಿಸಲಾಗಿದೆ.
ಈ ಶಿಬಿರವು ಬೆಳಿಗ್ಗೆ ೯ರಿಂದ ೧ರವರೆಗೆ ನಡೆಯಲಿದೆ. ಆರ್ಥಿಕವಾಗಿ ಹಿಂದುಳಿದವರಿಗೆ ಮಾತ್ರ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಲಾಗುವುದು. ಶಿಬಿರದಲ್ಲಿ ಆಯ್ಕೆಯಾದ ಫಲಾನುಭವಿಗಳನ್ನು ಶಂಕರಕಣ್ಣಿನ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಲಾಗುವುದು.
ಶಸ್ತ್ರ ಚಿಕಿತ್ಸೆ , ಲೆನ್ಸ್, ಊಟ, ಸಾರಿಗೆ ಇವೆಲ್ಲವೂ ಉಚಿತವಾಗಿರುತ್ತದೆ.
ಹೆಚ್ಚಿನ ವಿವರಕ್ಕೆ ೯೪೪೯೦೬೫೫೩೫ ಗೆ ಸಂಪರ್ಕಿಸಬಹುದಾಗಿದೆ.