ಶಿವಮೊಗ್ಗ, ಜ.೧೯:
ಶರಣ ಅಲ್ಲಮಪ್ರಭು ಅವರ ಹೆಸರನ್ನು ಶಿವಮೊ ಗ್ಗದ ಹೃದಯ ಭಾಗದಲ್ಲಿರುವ ಫ್ರೀಡಂ ಪಾರ್ಕಿಗೆ ನಾಮಕಾರಣ ಮಾಡಲು ಬೆಂಗಳೂರಿನಲ್ಲಿ ನಡೆದ ಸಚಿವ ಸಂಪುಟದ ಸಭೆಯಲ್ಲಿ ತೀರ್ಮಾನ ಕೈಗೊಳ್ಳ ಲಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಜನವರಿ ೧೨ ರಂದು ಶಿವಮೊಗ್ಗದ ಫ್ರೀಡಂ ಪಾಕ್೯ನಲ್ಲಿ ನಡೆದ ಯುವನಿಧಿ ಕಾರ್ಯಕ್ರಮದ ವೇಳೆ ಅಲ್ಲಮಪ್ರಭು ಹೆಸರು ನಾಮಕರಣ ಮಾಡುವಂತೆ ವೇದಿಕೆಯಲ್ಲಿದ್ದ ಸಿ.ಎಂ ಹಾಗೂ ಡಿಸಿಎಂ ಅವರಿಗೆ ಮಧು ಬಂಗಾರಪ್ಪ ಮನವಿ ಮಾಡಿದ್ದರು.

೧೨ನೇ ಶತಮಾನದಲ್ಲಿ ಅನುಭವ ಮಂಟಪದ ಅಧ್ಯಕ್ಷರಾಗಿ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಮೊದಲಿಗೆ ಈ ನೆಲದಲ್ಲಿ ಸ್ಥಾಪಿಸಿದ ಅಲ್ಲಮಪ್ರಭು ಅವರ ಹೆಸರನ್ನು ಶಿವಮೊಗ್ಗದ ಫ್ರೀಡಂ ಪಾರ್ಕ್ಗೆ ಇಡಬೇಕು ಎಂಬುದು ಜನತೆಯ ಒತ್ತಾಸೆ ಯಾಗಿತ್ತು. ೪೬.೩೨ ಎಕರೆ ವಿಸ್ತೀರ್ಣದ ಜೈಲು ಆವರಣದ ಈ ಮೈದಾನಕ್ಕೆ ಅಲ್ಲಮಪ್ರಭು ಹೆಸರು ನಾಮಕರಣ ಮಾಡುವ ದಶಕಗಳ ಕನಸು ಸಾಕಾರಗೊಂಡಿದೆ.

ಸಮ ಸಮಾಜದ ಕಲ್ಪನೆಯ ಜೊತೆಗೆ ಮಹಿಳೆಯರಿಗೆ ಸಮಾನ ಗೌರವ ಸ್ಥಾನಮಾನ ನೀಡಲು ಹೋರಾಟ ನಡೆಸಿದ, ಜಾತೀಯತೆ ನಿರ್ಮೂಲನೆಗೆ ಕ್ರಾಂತಿ

ಮಾಡಿದ ಮತ್ತು ತಮ್ಮ ವಚನಗಳ ಮೂಲಕ ಜಗತ್ತಿನ ಕಣ್ಣು ತೆರೆಸಿದ ಅಲ್ಲಮಪ್ರಭು ಅವರ ಆದರ್ಶಗಳು ಮುಂದಿನ ಯುವಪೀಳಿಗೆಗೆ ಮಾದರಿಯಾಗಬೇಕು ಎಂದು ಮಧು ಬಂಗಾರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿ.ಡಿ.ಮಂಜುನಾಥ್ ಸ್ವಾಗತಾರ್ಹ
ಶಿವಮೊಗ್ಗ,ಜ.೧೯:
ನಗರದ ಫ್ರೀಡಂ ಪಾರ್ಕ್ಗೆ ಅಲ್ಲಮ ಪ್ರಭು ಹೆಸರಿಡಲು ಸರ್ಕಾರ ನಿರ್ಧ ರಿಸಿರುವುದು ಅತ್ಯಂತ ಸ್ವಾಗತಾರ್ಹ ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ಸಂಯೋಜಕ ಜಿ.ಡಿ.ಮಂಜುನಾಥ್ ತಿಳಿಸಿದ್ದಾರೆ.
ಇತ್ತೀಚೆಗೆ ಶಿವಮೊಗ್ಗದಲ್ಲಿ ನೆಡೆದ ಯುವ ನಿಧಿ ಕಾರ್ಯಕ್ರಮದಲ್ಲಿ ನಗರದಲ್ಲಿರುವ ಫ್ರೀಡಂ ಪಾರ್ಕ್ಗೆ ಅಲ್ಲಮ ಪ್ರಭು ಹೆಸರನ್ನು ಘೋಷಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ನವರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದ್ದರು, ಅದೇ ವೇದಿಕೆಯಲ್ಲಿ ಮುಖ್ಯ ಮಂತ್ರಿಗಳು ಸಚಿವರ ಮನವಿಗೆ ಸೂಚ್ಯವಾಗಿ ಸ್ಪಂದಿಸಿ ಅಲ್ಲಮ ಪ್ರಭು ಹೆಸರನ್ನು ಘೋಷಿಸಿದರು ಎಂದರು.
ಮಧುಬಂಗಾರಪ್ಪನವರ ಸಲಹೆ ಮೇರೆಗೆ ಇಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ಫ್ರೀಡಂ ಪಾರ್ಕ್ ಗೆ “ಅಲ್ಲಮ ಪ್ರಭು ಉದ್ಯಾನವನ” ಎಂದು ಹೆಸರಿಡಲು ತೀರ್ಮಾನಿಸಲಾಗಿದೆ. ಇದು ಅತ್ಯಂತ ಸಂತೋಷದ ವಿಷಯ ಎಂದರು.