ಶಿವಮೊಗ್ಗ: ವಿಶ್ವಗುರು ಬಸವಣ್ಣನವರ ತತ್ವ ಆದರ್ಶ ಗುಣಗಳನ್ನು ಆಚರಿಸುವುದರ ಜೊತೆಗೆ ಜೀವನದಲ್ಲಿ ಅನುಷ್ಠಾನಗೊಳಿಸಿಕೊಳ್ಳಬೇಕು ಎಂದು ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಅಭಿಪ್ರಾಯಪಟ್ಟರು.

ಮಾನವತಾವಾದಿ, ವಿಶ್ವಗುರು ಬಸವಣ್ಣನನ್ನು ರಾಜ್ಯ ಸರ್ಕಾರವು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ಬಸವೇಶ್ವರ ವೃತ್ತದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕ, ತಾಲೂಕು ತಾಲೂಕು ಘಟಕ, ನಗರ ಘಟಕ, ಯುವ ಘಟಕ ಹಾಗೂ ಬಸವೇಶ್ವರ ವೀರಶೈವ ಸಮಾಜ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಆಯೋಜಿಸಿದ್ದ ಬಸವಣ್ಣ ಪುತ್ಥಳಿಗೆ ಮಾಲಾಪಣೆ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಬಸವಣ್ಣನವರು ವಿಶ್ವ ಗುರುಗಳಾಗಿದ್ದು, ಸರ್ಕಾರ ಸಾಂಸ್ಕೃತಿಕ ನಾಯಕ ಎಂದು ಗೌರವ ನೀಡಿರುವುದು ಎಲ್ಲರಿಗೂ ತುಂಬಾ ಸಂತೋಷವಾಗುತ್ತಿದೆ. ಬಸವಣ್ಣನವರ ಆದರ್ಶ ತತ್ವಗಳು ಹಾಗೂ ಅವರ ಆಚಾರ ವಿಚಾರಗಳನ್ನು ಮಾತನಾಡುವುದರ ಜೊತೆಗೆ ಅನುಷ್ಠಾನಗೊಳಿಸಬೇಕು. ಅವರು ಹಾಕಿಕೊಟ್ಟಂತಹ ಮಾರ್ಗಗಳು ವಚನಗಳು ಇಂದಿಗೂ ದಾರಿದೀಪವಾಗಿದೆ ಎಂದು ತಿಳಿಸಿದರು.

ಬಸವಕೇಂದ್ರದ ಶ್ರೀ ಬಸವಮರುಳಸಿದ್ಧ ಸ್ವಾಮೀಜಿ ಮಾತನಾಡಿ, ಸಾಮಾಜಿಕ ಮೌಲ್ಯಗಳ ಬಗ್ಗೆ ನಿಜಾರ್ಥದಲ್ಲಿ ಬದುಕಿನಲ್ಲಿ ಅಳವಡಿಸಿಕೊಂಡಲ್ಲಿ ಉತ್ತಮ ಜೀವನ ನಮ್ಮದಾಗುತ್ತದೆ. ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕ ಎಂಬುದು ಘೋಷಿಸಿರುವುದು ಅತ್ಯಂತ ಸಂತೋಷದ ಸಂಗತಿ ಎಂದು ಹೇಳಿದರು.

ಶಿಕಾರಿಪುರ ಶ್ರೀ ಚನ್ನಬಸವ ಸ್ವಾಮೀಜಿ, ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಎಸ್ ಎನ್ ರುದ್ರಮುನಿ. ಸಜ್ಜನ್ ಪ್ರಾಸ್ತವಿಕವಾಗಿ ಮಾತನಾಡಿ ಎಲ್ಲರನ್ನು ಸ್ವಾಗತಿಸಿದರು. ಸಮಾರಂಭದಲ್ಲಿ ವೀರಶೈವ ಸಮಾಜದ ಕಾರ್ಯದರ್ಶಿ ಎಸ್ ಪಿ ದಿನೇಶ್, ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ, ಡಾ. ಧನಂಜಯ ಸರ್ಜಿ, ಹೆಚ್ ಸಿ ಯೋಗೀಶ್, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕದ ಅಧ್ಯಕ್ಷ ಜಿ ವಿಜಯಕುಮಾರ್, ಮೋಹನ್ ಬಾಳೆಕಾಯಿ, ಮಲ್ಲಿಕಾರ್ಜುನ ಕಾನೂರು, ರಾಜಶೇಖರ್, ಬಳ್ಳಕೆರೆ ಸಂತೋಷ್, ಚಂದ್ರಶೇಖರ್ ತೆಲಗಿ ಹಾಳ, ಬೆನಕಪ್ಪ, ಮಹಾರುದ್ರ, ಬಾರಂದೂರು ಪ್ರಕಾಶ್, ಪರಮೇಶ್, ಶಿವರಾಜ್, ಮಾಜಿ ಕಾರ್ಪೊರೇಟರ್ ವಿಶ್ವಾಸ್, ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸಮಾಜದವರು ಉಪಸ್ಥಿತರಿದ್ದರು.

By admin

ನಿಮ್ಮದೊಂದು ಉತ್ತರ

You missed

error: Content is protected !!