
ಶಿವಮೊಗ್ಗ : ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ನಗರದ ಶಿವಪ್ಪನಾಯಕ ವೃತ್ತದಲ್ಲಿ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ಸಿಹಿ ಹಂಚುವ ವೇಳೆ ವ ಮಹಿಳೆಯೊಬ್ಬರು ಅಲ್ಲಾಹು ಅಕ್ಟರ್ ಎಂದು ಘೋಷಣೆ ಕೂಗಿರುವ ಘಟನೆ ನಡೆದಿದೆ.

ಶಿವಪ್ಪ ನಾಯಕ ವೃತ್ತದಲ್ಲಿ ರಾಮೋತ್ಸವದ ಹಿನ್ನೆಲೆಯಲ್ಲಿ ಸಿಹಿ ಹಂಚಿ ಸಂಭ್ರಮಿಸಿ, ಜೈಶ್ರೀರಾಮ್ ಎಂದು ಘೋಷಣೆ ಕೂಗುತ್ತಿದ್ದರು. ಈ ವೇಳೆ ಬಂದ ಓರ್ವ ಮುಸ್ಲಿಂ ಮಹಿಳೆ ಅಲ್ಲಾಹು ಅಕ್ಟರ್ ಎಂದು ಘೋಷಣೆ ಕೂಗಿದ್ದಾರೆ. ಅಲ್ಲದ ನೀವು ಮೋದಿ ಪರ ಕೆಲಸ ಮಾಡುತ್ತಿದ್ದೀರಿ ಎಂದು ಪೊಲಿಸರ ವಿರುದ್ಧವೇ ಕೂಗಾಟ ನಡೆಸಿದ್ದಾರೆ.

ಮಹಿಳೆಯ ವರ್ತನೆಯ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರು ಆಕೆಯನ್ನು ವಶಕ್ಕೆ ಪಡೆದಿದ್ದಾರೆ.

ಎಸ್ಪಿ ಸ್ಪಷ್ಟನೆ : ಶಿವಪ್ಪ ನಾಯಕ ವೃತ್ತದಲ್ಲಿ ನಡೆದ ಘಟನೆ ಕುರಿತು ತಂದೆಯ ಹೇಳಿಕೆಯಂತೆ ಮಹಿಳೆ ಮಾನಸಿಕ ಅಸ್ವಸ್ಥಳಾಗಿದ್ದಳು. ಮಹಿಳೆ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾಳೆ. ವೈದ್ಯಕೀಯ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಮಾದ್ಯಮಗಳಿಗೆ ತಿಳಿಸಿದ್ದಾರೆ