ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ ನೀಡುವತ್ತ ಗಮನ ಹರಿಸಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.
ತಾಲ್ಲೂಕಿನ ಹರೀಶಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ನಡೆದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
೩ ವರ್ಷದಲ್ಲಿ ಶಿಕ್ಷಣ ವ್ಯವಸ್ಥೆಯನ್ನು ಸಂಪೂರ್ಣ ಸುಧಾರಣೆ ಮಾಡಿ ಸರ್ಕಾರಿ ಶಾಲೆಯಲ್ಲಿಯೇ ಓದಬೇಕು ಎಂಬ ಮನಸ್ಥಿತಿ ಮಕ್ಕಳಲ್ಲಿ ಮೂಡುವಂತೆ ಮಾಡಲಾಗುವುದು. ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆ ಹೊರತರುವ ಕೆಲಸ ಮಾಡಲಾಗು ವುದು. ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಕಾರ್ಯ ಕ್ರಮ ರೂಪಿಸಿ ಅಭಿವೃದ್ಧಿಗೆ ಒತ್ತು ನೀಡುತ್ತಿದ್ದೇನೆ’ ಎಂದರು.
ರಾಜ್ಯದ ಜನರು ಕಾಂಗ್ರೆಸ್ ಮೇಲೆ ವಿಶ್ವಾಸವಿಟ್ಟು ಅಧಿಕಾರಕ್ಕೆ ತಂದಿದ್ದರಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ’ ಎಂದು ಹೇಳಿದರು.
ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಧನಂಜಯ ಜಿ.ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು., ಬಿಇಒ ಟಿ.ಎಂ.ಸತ್ಯನಾರಾಯಣ, ಎಸ್‌ಡಿಎಂಸಿ ಅಧ್ಯಕ್ಷ ಧನಂಜಯ ನಾಯ್ಕ್, ಮುಖ್ಯಶಿಕ್ಷಕ ವೆಂಕಟೇಶ ಎಂ.ಗಾವಡಿ, ಮುಖಂಡರಾದ ರಾಜೇಶ್ವರಿ, ನಾಗರಾಜ್ ಚಂದ್ರಗುತ್ತಿ, ಕೆ.ವಿ.ಗೌಡ, ಅನುಸೂಯಾ, ರವಿ ಕುಮಾರ್, ಮಂಜುನಾಥ್ ಕೋರಿಗೌಡರ್, ಮಂದಾರ ನಾಯ್ಕ, ಸುನಿಲ್ ಗೌಡ, ತಬಲಿ ಬಂಗಾರಪ್ಪ, ಗಣಪತಿ ಹುಲ್ತಿಕೊಪ್ಪ, ಸಾಕ್ಷಿ ಬಾಪಟ್, ಜಯಲಕ್ಷ್ಮಿ, ಮಂಜಮ್ಮ ಇದ್ದರು.