ಪದವಿ ಪೂರ್ವ ಕಾಲೇಜಿನ ಬಾಲಕಿಯರಿಗೆ ರಾಷ್ಟ್ರ ಮಟ್ಟದ ವಾಲಿಬಾಲ್ ಕ್ರೀಡಾಕೂಟ ಆಯೋಜನೆ.***
ಮಕ್ಕಳಲ್ಲಿ ಅಡಗಿರುವ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ ಅನೇಕ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸುತ್ತಿದ್ದೇವೆ. ಇದರಂತೆ ದೇಶದ ವಾಲಿಬಾಲ್ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ,
ಜಿಲ್ಲಾಡಳಿತ ಶಿವಮೊಗ್ಗ , ಜಿಲ್ಲಾ ಪಂಚಾಯತ್ ಶಿವಮೊಗ್ಗ.
67 ನೇ ರಾಷ್ಟ್ರೀಯ ಶಾಲಾ ಕ್ರೀಡಾ ಸಚಿವಾಲಯ,ಭಾರತ ಸರ್ಕಾರ, ನವದೆಹಲಿ.
ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಶಿವಮೊಗ್ಗ.
ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ (ರಿ)ಶಿವಮೊಗ್ಗ .
ಶ್ರೀ ಆದಿಚುಂಚನಗಿರಿ ಸ್ವತಂತ್ರ ಪದವಿ ಪೂರ್ವ ಕಾಲೇಜು, ಶಿವಮೊಗ್ಗ.
ಹಾಗೂ ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್, ಶಿವಮೊಗ್ಗ.
ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದು,
ಪದ್ಮಭೂಷಣ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಕೃಪಾಶೀರ್ವಾದಗಳೊಂದಿಗೆ,
ಈ ಕ್ರೀಡಾ ಕೂಟದ ದಿವ್ಯ ಸಾನಿಧ್ಯವನ್ನು ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರು ಸಾನ್ನಿಧ್ಯ ವಹಿಸಲಿದ್ದು, ಹಾಗೂ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ದಿವ್ಯ ಉಪಸ್ಥಿತಿ ವಹಿಸಿಸುವರು.
67 ನೇ ರಾಷ್ಟ್ರಮಟ್ಟದ 19 ವರ್ಷ ವಯೋಮಿತಿ ಒಳಗಿನ ಪದಪೂರ್ವ ಕಾಲೇಜಿನ ಬಾಲಕಿಯರಿಗೆ ಹೊನಲು ಬೆಳಕಿನ ವಾಲಿಬಾಲ್ ಕ್ರೀಡಾಕೂಟ ಆಯೋಜಿಸಲಾಗಿದ್ದು, ಈ ಕ್ರೀಡಾಕೂಟದಲ್ಲಿ ಭಾರತದ ವಿವಿಧ ರಾಜ್ಯಗಳಿಂದ 44 ಬಾಲಕಿಯರ ವಾಲಿಬಾಲ್ ತಂಡಗಳು ಭಾಗವಹಿಸಿ ಅದ್ಭುತ ಪ್ರದರ್ಶನ ನೀಡಲಿವೆ.
ಪಂದ್ಯಾವಳಿಯ ಜನವರಿ 29 ರಿಂದ ಫೆಬ್ರವರಿ 01ರವರಿಗೆ ನಾಲ್ಕು ದಿನಗಳ ಕಾಲ ವಾಲಿಬಾಲ್ ಕ್ರೀಡಾಕೂಟ ನಡೆಯಲಿದ್ದು, ಆಟಗಾರ ಅನುಕೂಲಕ್ಕಾಗಿ ಉತ್ತಮ 5 ಅಂಕಣಗಳನ್ನು ಸಿದ್ಧಪಡಿಸಲಾಗಿದೆ. ರಾಜ್ಯ ಮತ್ತು ರಾಷ್ಟ್ರ ಮಟ್ಟದ ನುರಿತ ವಾಲಿಬಾಲ್ ತೀರ್ಪುಗಾರರು ಆಗಮಿಸಲಿದ್ದಾರೆ. ದೇಶದ ವಿವಿಧ ರಾಜ್ಯಗಳಿಂದ ಬರುವ ಎಲ್ಲಾ ಕ್ರೀಡಾಪಟುಗಳಿಗೂ ವಸತಿ, ಸಾರಿಗೆ ಹಾಗೂ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ.
ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ 29.01.2024 ರಂದು ಬೆಳಿಗ್ಗೆ 10 ಗಂಟೆಗೆ ಪದವಿ ಪೂರ್ವ ಕಾಲೇಜಿನ 67ನೇ ರಾಷ್ಟ್ರಮಟ್ಟದ ವಾಲಿಬಾಲ್ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಜಿಲ್ಲೆಯ ಅಧಿಕಾರಿಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಫೆ.01.02. 2024 ರಂದು ಸಂಜೆ 6 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಅಂದು ಬಾಲಕಿಯರ ಅಂತಿಮ ಹಂತದ ಫೈನಲ್ ಪಂದ್ಯ ನಡೆಯಲಿದೆ. ಈ ಪಂದ್ಯಾವಳಿಯಲ್ಲಿ ವಿವಿಧ ರಾಜ್ಯಗಳಿಂದ ಬರುವ ರಾಷ್ಟ್ರ ಮತ್ತು ಅಂತರಾಷ್ಟ್ರಮಟ್ಟದ ಹೆಸರಾಂತ ಕ್ರೀಡಾ ಪ್ರತಿಭೆಗಳು ಭಾಗವಹಿಸುತ್ತಿರುವುದು ಮತ್ತೊಂದು ವಿಶೇಷ. ಕ್ರೀಡಾ ಪ್ರೇಮಿಗಳು, ಕ್ರೀಡಾ ಪ್ರೋತ್ಸಾಹಕರು ಈ ಕ್ರೀಡಾಕೂಟದ ಯಶಸ್ವಿಗೆ ಸಹಕರಿಸಿ, ಪ್ರೋತ್ಸಾಹ ನೀಡ ಬೇಕಾಗಿ ಕ್ರೀಡಾ ಆಯೋಜಕರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.