ಶಿವಮೊಗ್ಗ, ಜ.೩೦:
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿ ಯಿಂದ ಫೆ.೧ ಮತ್ತು ೨ ರಂದು ಗೋಪಿ ಶೆಟ್ಟಿಕೊಪ್ಪದ ಸಾಹಿತ್ಯ ಗ್ರಾಮದಲ್ಲಿ ಜಿಲ್ಲಾ ೧೮ ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ. ಹಿರಿಯ ಸಾಹಿತಿ ಡಾ. ಎಸ್.ಪಿ.ಪದ್ಮಪ್ರಸಾದ್ ಅವರನ್ನು ಸಮ್ಮೇ ಳನಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಡಿ.ಮಂಜುನಾಥ ತಿಳಿಸಿದರು.
ಫೆ.೧ ರಂದು ಬೆಳಗ್ಗೆ ೦೯:೩೦ ಕ್ಕೆ ಸಾಹಿತ್ಯ ಗ್ರಾಮದ ಆವರಣದಲ್ಲಿ ಧ್ವಜಾ ರೋಹಣ ನಡೆಯಲ್ಲಿದ್ದು, ಹುಲಿ ಸಿಂಹ ಧಾಮ ಕಾರ್ಯನಿರ್ವಹಣಾಧಿಕಾರಿ ಮುಕುಂದಚಂದ್ರ, ಇದನ್ನು ನಡೆಸಿಕೊ ಡುವರು ೧೦ ಕ್ಕೆ ಗೋಪಾಳದ ಆನೆ ಪ್ರತಿಮೆ ವೃತ್ತದಿಂದ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಪ್ರಾರಂಭವಾಗುವ ಸಮ್ಮೇಳನಾಧ್ಯಕ್ಷರ ರಾಜಬೀದಿ ಉತ್ಸವ ನಡೆಯಲಿದೆ.ಎಂದರು.


ಬೆಳಗ್ಗೆ ೧೧ ಕ್ಕೆ ನಡೆಯುವ ಜ್ಯೋತಿ ಬೆಳಗೋಣ ಬನ್ನಿ ಉದ್ಘಾಟನಾ ಸಮಾ ರಂಭದಲ್ಲಿ ಸಚಿವ ಮಧು ಬಂಗಾರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾ ಕಸಾಪ ಅಧ್ಯಕ್ಷರಾದ ಡಿ.ಮಂಜುನಾಥ ಆಶಯ ಮಾತುಗಳನ್ನಾಡಲಿದ್ದಾರೆ. ಕಸಾಪ ರಾಜ್ಯಾಧ್ಯಕ್ಷರಾದ ನಾಡೋಜ ಮಹೇಶ ಜೋಷಿ, ಹಿರಿಯ ಸಾಹಿತಿ ಎಲ್.ಎನ್. ಮುಕುಂದರಾಜ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಹಿರಿಯ ಸಾಹಿತಿ ಡಾ.ಎಸ್.ಪಿ.ಪದ್ಮಪ್ರಸಾದ್ ಸಮ್ಮೇಳನಾ ಧ್ಯಕ್ಷರ ಮಾತುಗಳನ್ನಾಡಲಿದ್ದು, ನಿಕಟ ಪೂರ್ವ ಸಮ್ಮೇಳನಾಧ್ಯಕ್ಷರಾದ ಲಕ್ಷ್ಮಣ ಕೊಡಸೆ ಉಪಸ್ಥಿತರಿರುವರು. ಶಾಸಕರಾದ ಶಾರದಾ ಪೂರ್ಯಾನಾಯ್ಕ, ಎಸ್.ಎನ್. ಚನ್ನಬಸಪ್ಪ, ಬೇಳೂರು ಗೋಪಾಲಕೃಷ್ಣ, ಎಸ್.ಎಲ್.ಭೋಜೇಗೌಡ, ಡಿ.ಎಸ್. ಅರುಣ್, ವೈದ್ಯ ಧನಂಜಯ ಸರ್ಜಿ ಅತಿಥಿ ಗಳಾಗಿ ಭಾಗವಹಿಸಲಿದ್ದಾರೆ ಎಂದರು.


ನಂತರ ಕವಿಗೋಷ್ಟಿ ನಡೆಯಲಿದೆ. ಸಂಜೆ ೪ ಗಂಟೆಗೆ ನಡೆಯುವ ಸಮ್ಮೇಳ ನಾಧ್ಯಕ್ಷರ ಬದುಕು ಬರಹ ಗೋಷ್ಟಿಯಲ್ಲಿ ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷ ತ್ತಿನ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಯ್ಯ ಅಧ್ಯಕ್ಷತೆ ವಹಿಸಲಿದ್ದು, ಸಮ್ಮೇಳನಾಧ್ಯಕ್ಷರ ಸೃಜನಶೀಲ ಸಾಹಿತ್ಯ ಕುರಿತು ಸಾಹಿತಿ ಡಾ.ಶ್ರೀಪತಿ ಹಳಗುಂದ, ಸಂಪಾದಿತ ಮತ್ತು ಅನುವಾದಿತ ಕೃತಿ ಕುರಿತು ಸಾಹಿತಿ ಡಾ.ಸುಂಕುಂ ಗೋವರ್ಧನ, ಅಂಕಣ ಬರಹ ವಿಮರ್ಶೆ ಹಾಗೂ ಜಾನಪದ ಕೃತಿ ಗಳ ಸಂಕೀರ್ಣದ ಕುರಿತು ಡಾ.ರತ್ನಾಕರ ಕುನಗೋಡು ಮಾತನಾಡಲಿದ್ದಾರೆಎಂದರು.


ಸಂಜೆ ೬: ಗಂಟೆಗೆ ನಡೆಯುವ ಕನ್ನಡ ಸಾಹಿತ್ಯ ಸವಾಲುಗಳು ಕುರಿತು ಸಾಹಿತಿ ಡಾ. ಮಾರ್ಷಲ್ ಶರಾಮ್ ಅಧ್ಯಕ್ಷತೆ ವಹಿಸುವರು. ಫೆ.೦೨ ರಂದು ಬೆಳಗ್ಗೆ ೧೦:೩೦ ಕ್ಕೆ ನಡೆ ಯುವ ಕನ್ನಡ ಬೇಗುದಿಗಳು ಗೋಷ್ಟಿಯಲ್ಲಿ ಮಾಜಿ ಶಾಸಕ ಆರ್.ಕೆ. ಸಿದ್ದರಾಮಣ್ಣ ಅಧ್ಯ ಕ್ಷತೆ ವಹಿಸುವರು. ೧೨:೩೦ ಕ್ಕೆ ನಡೆಯುವ ಮುಳುಗುತ್ತಿರುವ ಮಲೆನಾಡು ಗೋಷ್ಟಿ ಯಲ್ಲಿ ಚಿಂತಕ ರಾಜಪ್ಪಮಾಸ್ತರ್ ಅಧ್ಯಕ್ಷತೆ ವಹಿಸಲಿದ್ದು, ಡಿವಿಎಸ್ ಅಧ್ಯಕ್ಷರಾದ ಕೊಳಲೆ ರುದ್ರಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸ ಲಿದ್ದಾರೆ. ಅರಣ್ಯ ಆತಂಕ ಕುರಿತು ಸತೀಶ್.ಜಿ.ಕೆ, ಕೃಷಿ ಸವಾಲು ಕುರಿತು ಕಂಬಳಗೆರೆ ರಾಜೇಂದ್ರ, ನೀರು ನಿರ್ವಹಣೆ ಕುರಿತು ಡಾ||ವಿ.ಎಲ್.ಎಸ್. ಕುಮಾರ್ ಮಾತನಾಡಲಿದ್ದಾರೆ ಎಂದರು.


ಸಂಜೆ ೦೫:೩೦ ಕ್ಕೆ ನಡೆಯುವ ಹೊಸತಲೆಮಾರು ಸಾಹಿತ್ಯ ಸಂವೇದನೆ ಗೋಷ್ಟಿ ನಡೆಯಲಿದೆ ಎಂದರು
ಫೆ. ೨ರ ಸಂಜೆ ೬: ೩೦ ಕ್ಕೆ ನಡೆಯುವ ಸಮಾರೋಪ ಸಮಾ ರಂಭದಲ್ಲಿ ಕುವೆಂಪು ವಿಶ್ವವಿದ್ಯಾ ಲಯದ ಪ್ರಾಧ್ಯಾಪಕರಾದ ಡಾ.ಜಿ.ಪ್ರಶಾಂತ ನಾಯಕ ಸಮಾರೋಪ ಮಾತುಗಳನ್ನಾಡಲಿ ದ್ದಾರೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ (ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಶಾಸಕರಾದ ಎಸ್.ರುದ್ರೇಗೌಡ, ಬಿ.ಕೆ.ಸಂಗ ಮೇಶ್, ಬಿ.ವೈ.ವಿಜಯೇಂದ್ರ, ಉದ್ಯಮಿ ಎಂ.ಶ್ರೀಕಾಂತ್, ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ, ರಕ್ಷಣಾಧಿಕಾರಿ ಮಿಥುನ್ ಕುಮಾರ್, ಜಿಲ್ಲಾ ಪಂಚಾಯತಿ ಸಿಇಓ ಸ್ನೇಹಲ್ ಸುಧಾಕರ ಲೋಕಂಡೆ, ಮಹಾ ನಗರ ಪಾಲಿಕೆ ಆಯುಕ್ತ ಕೆ.ಮಾಯಣ್ಣಗೌಡ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಇದೇ ವೇಳೆ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಗುತ್ತಿದೆ ಎಂದರು.
ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ಕಸಾಪ ಪದಾಧಿಕಾರಿಗಳಾದ ಎಂ.ನವೀನ್ ಕುಮಾರ್, ಡಿ.ಗಣೇಶ್, ಎಸ್.ಷಣ್ಮುಖಪ್ಪ, ತಾಲ್ಲೂಕು ಕಸಾಪ ಅಧ್ಯಕ್ಷರಾದ ಮಹಾದೇವಿ, ಬಿ.ಟಿ.ಅಂಬಿಕಾ, ಭೈರಾಪುರ ಶಿವಪ್ಪಗೌಡ, ಸೋಮಿನಕಟ್ಟಿ, ಅನುರಾಧ, ನಳೀನಾಕ್ಷಿ, ಎಸ್.ಶಿವಮೂರ್ತಿ ಉಪಸ್ಥಿತರಿದ್ದರು.

By admin

ನಿಮ್ಮದೊಂದು ಉತ್ತರ

You missed

error: Content is protected !!