ಶಿವಮೊಗ್ಗ,ಜ.೩೧:
ಹಿರಿಯ ಶಾಸಕ, ಕಾಂಗ್ರೆಸ್ ಮುಖಂಡರಾದ ಶಾಮನೂರು ಶಿವಶಂಕರಪ್ಪನವರು ಬಿ.ವೈ.ರಾಘವೇಂದ್ರ ಅವರನ್ನು ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ನಿಲ್ಲಿಸಿ ಗೆಲ್ಲಿಸಿ ತಮ್ಮ ಕ್ಷೇತ್ರದಲ್ಲಿ ಹೆಚ್ಚು ಕೆಲಸವನ್ನು ಅಭಿವೃದ್ಧಿ ಯನ್ನು ಮಾಡಿಸಿಕೊಳ್ಳಲಿ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಇಂದು ಪತ್ರಿಕಾಗೋಷ್ಠಿ ಯಲ್ಲಿ ವ್ಯಂಗ್ಯವಾಡಿದ್ದಾರೆ.
ಇತ್ತೀಚೆಗೆ ಶಿವಮೊಗ್ಗದ ಬೆಕ್ಕಿನ ಕಲ್ಮಠದಲ್ಲಿ ನಡೆದ ಸಮಾರಂಭದಲ್ಲಿ ಶಾಮನೂರು ಶಿವಶಂಕರಪ್ಪ ಅವರು, ಬಿ.ವೈ.ರಾಘವೇಂದ್ರ ಅವರನ್ನು ಗೆಲ್ಲಿಸಬೇಕು ಎಂದು ಹೇಳಿದ್ದಾರಲ್ಲ, ಅದಕ್ಕೆ ನಿಮ್ಮ ಅಭಿಪ್ರಾಯವೇನು ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ ಮಾತನಾಡಿದ ಅವರು, ಶಾಮನೂರು ಶಿವಶಂಕರಪ್ಪ ಅವರು ತುಂಬ ಚಾಣಾಕ್ಷ ರಾಜಕಾರಣಿ, ಹಿರಿಯರು ಅವರ ಬಗ್ಗೆ ಅಪಾರ ಗೌರವ ವಿದೆ. ನಾವಿಬ್ಬರು ಒಟ್ಟಿಗೆ ಲೋಕಸಭೆಗೆ ಪ್ರವೇಶ ಪಡೆದಿದ್ದೆವು. ಸಂದರ್ಭವನ್ನು ನೋಡಿಕೊಂಡು ಮಾತ ನಾಡಿದ್ದಾರೆ. ಅವರಿಂದ
ಅಚಾತುರ್ಯವಾಗಿದೆ ನಿಜ. ಮತ್ತೊಂದು ರೀತಿಯಲ್ಲಿ ಕಾಂಗ್ರೆಸ್ಗೆ ಲಾಭವು ಆಗಿದೆ. ಅವರ ಹೇಳಿಕೆಯಿಂದ ವೀರಶೈವರಲ್ಲದ ಹಿಂದುಳಿದ ವರ್ಗಗಳು ಜಾಗೃತಗೊಂಡಿವೆ. ಇದು ಕಾಂಗ್ರೆಸ್ಗೆ ಲಾಭ ವೂ ಆಗುತ್ತದೆ. ಬಹುಶಃ ಇದನ್ನು ಗಮನದಲ್ಲಿಟ್ಟು ಕೊಂಡು ಶಾಮನೂರು ಅವರು ಬಿಜೆಪಿಗೆ ಒಳಹೊಡೆತ ಹೊಡೆದಿದ್ದಾರೆ ಎಂದರು.
ನಿಮ್ಮ ಬಗ್ಗೆ ಕಾಂಗ್ರೆಸ್ನವರೇ ದೂರು ಕೊಟ್ಟಿ ದ್ದಾರಲ್ಲ ಎಂಬ ಪತ್ರಕರ್ತರ ಮತ್ತೊಂದು ಪ್ರಶ್ನೆಗೆ ಉತ್ತರಿ ಸಿದ ಅವರು, ಪ್ರೇತಾತ್ಮಗಳಿಗೆ ಉತ್ತರಿಸುವ ಅವಶ್ಯಕತೆ ಇಲ್ಲ. ಅವರು ನಿಜವಾಗಿಯೂ ದೂರು ಕೊಡಬೇಕಾ ದದ್ದು ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದು ಹೇಳಿದ ಹಿರಿಯರಿಗೆ. ಅವರಿಗೆ ಉತ್ತರ ಕೊಡಲು ಅಥವಾ ಅವರ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ಗೆ ದೂರು ಕೊಡಲು ಇವರಿಗೆ ತಾಕತ್ತಿಲ್ಲ. ನನ್ನ ಬಗ್ಗೆ ದೂರು ಕೊಡಲು ಹೋಗಿದ್ದಾರೆ. ಅವರಿಗೆ ಅವಮಾನ ಮಾಡುವಂತಹ ಮಾತನ್ನು ನಾನು ಆಡಿಲ್ಲ. ಹೈಕಮಾಂಡ್ ನನಗೆ ನೋಟೀಸ್ ಕೊಟ್ಟರೆ ಉತ್ತರ ನೀಡುತ್ತೇನೆ ಎಂದರು.
ಆದರೆ, ಬೆಕ್ಕಿನಕಲ್ಮಠದ ಸಮಾರಂಭದಲ್ಲಿಯೇ ಅಧ್ಯಕ್ಷತೆ ವಹಿಸಿದ್ದ ಈ ಮಹಾನುಭವರು ಕೊನೆಪಕ್ಷ ಶಾಮನೂರು ಹೇಳಿಕೆಯನ್ನು ಅಲ್ಲಿಯೇ ಹೇಳಿ ಉತ್ತರ ನೀಡಬಹುದಿತ್ತು. ನಂತರವಾದರೂ ಉತ್ತರ ನೀಡ ಬಹುದಿತ್ತು. ಅವರು ಬಾಯಿಯೇ ಬಿಡಲಿಲ್ಲ. ಒಟ್ಟಾರೆ ಅವರ ಹೇಳಿಕೆಯೊಂದು ಸಣ್ಣ ಅಚಾತುರ್ಯವಾಗಿದೆ. ಇದರಿಂದ ಕಾಂಗ್ರೆಸ್ಗೆ ಲಾಭವಾಗಿದೆ ಎಂದರು.