ಶಿವಮೊಗ್ಗ, ಫೆ.03:
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಹೊಸನಗರ ತಾಲ್ಲೂಕಿನ ಆರೋಪಿಗೆ ಶಿವಮೊಗ್ಗದ FTSC-1 ನ್ಯಾಯಲಯ ವಿಚಾರಣೆ ನಡೆಸಿ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
ವಿವರ:
2022ನೇ ಸಾಲಿನಲ್ಲಿ ಹೊಸನಗರ ತಾಲ್ಲೂಕಿನ ವಾಸಿ 25 ವರ್ಷದ ಯುವಕನು 15 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದು, ಈ ಬಗ್ಗೆ ನೊಂದ ಬಾಲಕಿಯು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿರುತ್ತದೆ.
ಸದರಿ ಪ್ರಕರಣದಲ್ಲಿ ಆಗಿನ ತನಿಖಾಧಿಕಾರಿ ಗಿರೀಶ್ ಬಿ.ಸಿ, ಪೊಲೀಸ್ ವೃತ್ತ ನಿರೀಕ್ಷಕರು, ಹೊಸನಗರ ವೃತ್ತ ರವರು ಆರೋಪಿತನ ವಿರುದ್ಧ ಘನ ನ್ಯಾಯಾಲಯಕ್ಕೆ ಅಂತಿಮ ವರದಿಯನ್ನು ಸಲ್ಲಿಸಿದ್ದರು.


ಪ್ರಕರಣದಲ್ಲಿ ಸರ್ಕಾರದ ಪರವಾಗಿ ಹರಿಪ್ರಸಾದ್, ಸರ್ಕಾರಿ ಅಭಿಯೋಜಕರು ವಾದ ಮಂಡಿಸಿದ್ದು, ಶಿವಮೊಗ್ಗದ FTSC-1 ನ್ಯಾಯಲಯದಲ್ಲಿ ಪ್ರಕರಣದ ವಿಚಾರಣೆ ನಡೆದು, ಆರೋಪಿ ವಿರುದ್ಧ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ, ನ್ಯಾಯಾಧೀಶರಾದ ಲತಾ ಅವರು ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 50,000/- ರೂ ದಂಡ, ದಂಡ ಕಟ್ಟಲು ವಿಫಲನಾದಲ್ಲಿ ಹೆಚ್ಚುವರಿ 4 ತಿಂಗಳು ಸಾಧಾ ಕಾರಾವಾಸ ಶಿಕ್ಷೆ ವಿಧಿಸಿ ಆದೇಶಿಸಿರುತ್ತಾರೆ.

By admin

ನಿಮ್ಮದೊಂದು ಉತ್ತರ

error: Content is protected !!