ಶಿವಮೊಗ್ಗ,ಫೆ.08: ಪಂಚಮಸಾಲಿ ಲಿಂಗಾಯಿತ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಶಿವಮೊಗ್ಗದಲ್ಲಿ ಫೆ.14ರಂದು ಗೋಪಿವೃತ್ತದಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜೆ ಮಾಡುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಕೂಡಲ ಸಂಗಮದ ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಅವರು ಇಂದು ಮೀಡಿಯಾ ಹೌಸ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪಂಚಮಸಾಲಿ ಸಮಾಜದ ನಿರಂತರ ಹೋರಾಟದ ಫಲವಾಗಿ ಬೊಮ್ಮಾಯಿ ಸರ್ಕಾರ 2ಡಿ ಮೀಸಲಾತಿ ಘೋಷಿಸಿತ್ತು. ಚುನಾವಣೆ ಸಂದರ್ಭ ಬಂದಿದ್ದರಿAದ ಜಾರಿಗೆ ತರಲು ಆಗಲಿಲ್ಲ. ನೀತಿ ಸಂಹಿತೆ ಇದಕ್ಕೆ ಅಡ್ಡಿಯಾಯಿತು. ನಾವು ಕೂಡ ಆ ಸಂದರ್ಭದಲ್ಲಿ ಒಪ್ಪಿಕೊಂಡಿದ್ದೇವೆ ಎಂದರು.
ಈಗ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಮುಖ್ಯಮಂತ್ರಿಗಳಿಗೆ ಈ ಬಗ್ಗೆ ಮನವಿ ಮಾಡಿದ್ದೇವೆ. ಬೆಳಗಾವಿ ಅಧಿವೇಶನದಲ್ಲೂ ಕೂಡ ನಮ್ಮ ಜನಾಂಗದ ಶಾಸಕರು ಈ ಬಗ್ಗೆ ಒತ್ತಾಯ ತಂದಿದ್ದರು. ಮುಖ್ಯಮಂತ್ರಿಗಳು ಕೂಡ ಕಾನೂನು ತಜ್ಞರ ಸಭೆ ಕರೆಯುವುದಾಗಿ ತಿಳಿಸಿದ್ದರು. ಈಗ ತಿಂಗಳಾಗುತ್ತ ಬಂದಿದ್ದರು ಕೂಡ ಈ ಬಗ್ಗೆ ರಾಜ್ಯ ಸರ್ಕಾರದ ಮುಂದೆ ಯಾವುದೇ ಪ್ರಸ್ತಾಪವಾಗಿಲ್ಲ ಎಂದರು.
ಪAಚಮಸಾಲಿ, ಗೌಡ, ಮಲೆಗೌಡ, ದೀಕ್ಷೆ ಲಿಂಗಾಯಿತರಿಗೆ 2ಎ ಮೀಸಲಾತಿ ಅನುಷ್ಠಾನಕ್ಕೆ ಹಾಗೂ ಲಿಂಗಾಯಿತ ಉಪಸಮಾಜಗಳಿಗೆ ಓಬಿಸಿ ಮೀಸಲಾತಿಗೆ ಕೂಡಲೇ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು ಇದು ನಮ್ಮ 2ನೇ ಹಂತದ ಹೋರಾಟವಾಗಿದೆ ಎಂದರು.
ಪAಚಮಸಾಲಿ ಮೀಸಲಾತಿ ಚಳುವಳಿ ರಾಷ್ಟಾçದಾದ್ಯಂತ ಹೋರಾಟ ನಡೆದಿದೆ. ಅದೇ ರೀತಿ ಕರ್ನಾಟಕದಲ್ಲಿಯೂ ಕೂಡ ಎಲ್ಲ ಒಳಪಂಗಡಗಳಿಗೂ ಓಬಿಸಿ ಮೀಸಲಾತಿ ಕಲ್ಪಿಸಬೇಕು ಎಂಬುವುದು 3 ವರ್ಷದ ಹೋರಾಟವಾಗಿದೆ. ಈ ಹೋರಾಟ ನಡೆದ ಸಂದರ್ಭಗಳಲ್ಲಿ ಆಗಿನ ಬಿಜೆಪಿ ಸರ್ಕಾರ ಮತ್ತು ಈಗಿನ ಕಾಂಗ್ರೆಸ್ ಸರ್ಕಾರ ನಮಗೆ ಭರವಸೆ ನೀಡಿತ್ತು. ಆದರೆ ಎರಡು ಸರ್ಕಾರಗಳು ಇದನ್ನು ಈಡೇರಿಸಿಲ್ಲ. ಈಗಿನ ಸರ್ಕಾರವಾದರೂ ನಮ್ಮ ಬೇಡಿಕೆ ಈಡೇರಿಸಬೇಕು ಎಂದರು.
ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಹೆದ್ದಾರಿಯಲ್ಲಿ ಇಷ್ಟಲಿಂಗ ಪೂಜೆ ಸಲ್ಲಿಸುವ ಮೂಲಕ ನಾವು ಪ್ರತಿಭಟನೆಯನ್ನು ಆರಂಭಿಸಿದ್ದೇವೆ. ಈಗಾಗಲೇ 9 ಜಿಲ್ಲೆಗಳಲ್ಲಿ ರಸ್ತೆ ತಡೆ ನಡೆಸಿದ್ದೇವೆ. ಈಗ ಶಿವಮೊಗ್ಗದಲ್ಲೂ ಕೂಡ ಈ ಪ್ರತಿಭಟನೆ ನಡೆಯುತ್ತದೆ. ಫೆ.14ರಂದು ಬೆಳಿಗ್ಗೆ 10ಕ್ಕೆ ಶಿವಪ್ಪನಾಯಕ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಪ್ರತಿಭಟನ ಮೆರವಣ ಗೆಯನ್ನು ಆರಂಭಿಸಿ ಗೋಪಿ ವೃತ್ತದಲ್ಲಿ ಸಾಮೂಹಿಕವಾಗಿ ಇಷ್ಟಲಿಂಗ ಪೂಜೆ ಮಾಡುವ ಮೂಲಕ ನಮ್ಮ ಬೇಡಿಕೆಯನ್ನು ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾಯಿಸುತ್ತಿದ್ದೇವೆ. ಈ ಪ್ರತಿಭಟನೆಯಲ್ಲಿ ಸಮಾಜದ ಸಾವಿರಾರು ಜನರು ಭಾಗವಹಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪಂಚಮಸಾಲಿ ಸಮಾಜದ ಪ್ರಮುಖರಾದ ಹೆಚ್.ವಿ.ಮಹೇಶ್ವರಪ್ಪ, ಶಿವಕುಮಾರ್ ಬಿ.ಎಸ್., ಬಳ್ಳಕೆರೆ ಸಂತೋಷ್, ಮಹೇಶ್‌ಮೂರ್ತಿ, ಡಾ.ಲಿಂಗಪ್ಪ ಚಳಗೇರಿ, ವಿಜಯ್‌ಕುಮಾರ್, ರುದ್ರೇಗೌಡ, ಸತೀಶ್, ಶಿವರಾಜ್, ರಾಜಶೇಖರ್ ಇನ್ನಿತರರು ಇದ್ದರು.