ಶಿವಮೊಗ್ಗ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಸಹಯೋಗದಲ್ಲಿ ಫೆ. 10 ರಂದು ಶನಿವಾರ ಬೆಳಿಗ್ಗೆ 10:30 ಕ್ಕೆ ದತ್ತಿ ಕಾರ್ಯಕ್ರಮ ಏರ್ಪಡಿಸಲಾಗಿದೆ.

ದೇವಂಗಿ ಡಿ.ಆರ್.ರತ್ನಾಕರ್ ದತ್ತಿ ಹಾಗೂ ಜಿ.ಬಿ.ಲಲಿತ ದತ್ತಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕುವೆಂಪು ಸಾಹಿತ್ಯದಲ್ಲಿ ವೈಜ್ಞಾನಿಕ ದೃಷ್ಟಿಕೋನ ವಿಚಾರವಾಗಿ ಸಾಹಿತಿಗಳಾದ ಡಾ. ಎಚ್.ಟಿ. ಕೃಷ್ಣಮೂರ್ತಿ ಅವರು ಮಾತನಾಡಲಿದ್ದು, ವಚನ ಸಾಹಿತ್ಯದಲ್ಲಿ ಸ್ತ್ರೀ ಸಂವೇದನೆ ವಿಚಾರವಾಗಿ ಉಪನ್ಯಾಸಕಿ ಡಾ.ಜಿ.ಕೆ. ಪ್ರೇಮ ಅವರು ಮಾತನಾಡಲಿದ್ದಾರೆ.

ಕಸಾಪ ಜಿಲ್ಲಾ ಅಧ್ಯಕ್ಷರಾದ ಡಿ. ಮಂಜುನಾಥ ಉದ್ಘಾಟಿಸಲಿದ್ದು, ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ರಾಜೇಶ್ವರಿ ಎನ್. ಅಧ್ಯಕ್ಷತೆ ವಹಿಸಲಿದ್ದಾರೆ. ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಎಸ್. ಎಂ. ಮುತ್ತಯ್ಯ ಉಪಸ್ಥಿತರಿರುವರು. ಇದೇ ವೇಳೆ 18 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದ ಪಾತ್ ವೇ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಗುತ್ತಿದೆ.