
ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 42 NDPS ಪ್ರಕರಣಗಳಲ್ಲಿ ಅಮಾನತ್ತು ಪಡಿಸಿಕೊಳ್ಳಲಾದ ಅಂದಾಜು ಮೌಲ್ಯ 13,16,400/- ರೂಗಳ ಒಟ್ಟು 34 ಕೆಜಿ 825 ಗ್ರಾಂ ತೂಕದ ಮಾದಕ ವಸ್ತು ಗಾಂಜಾವನ್ನು ಇಂದು ಮೇ|| ಶುಶ್ರುತ ಬಯೋ ಮೆಡಿಕಲ್ ವೇಸ್ಟ್ ಮ್ಯಾನೇಜ್ ಮೆಂಟ್ ಸೊಸೈಟಿ (ರಿ) ಕೈಗಾರಿಕಾ ಪ್ರದೇಶ ಮಾಚೇನಹಳ್ಳಿಯಲ್ಲಿ ಶಿವಮೊಗ್ಗ ಜಿಲ್ಲಾ ಮಾದಕ ವಸ್ತು ವಿಲೇವಾರಿ ಸಮಿತಿಯ ಅಧ್ಯಕ್ಷ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಜಿ.ಕೆ. ಇವರ ಸಮ್ಮುಖದಲ್ಲಿ ನಾಶ ಪಡಿಸಲಾಯಿತು.

ಶಿವಮೊಗ್ಗ ಜಿಲ್ಲೆಯಾದ್ಯಂತ ಮಾದಕ ವಸ್ತು ಗಾಂಜಾ ಮಾರಾಟ, ಸಾಗಟ, ಸಂಗ್ರಹಣೆ ಮತ್ತು ಬೆಳೆಯುವವರ ವಿರುದ್ಧ ನಿರ್ದಾಕ್ಷಿಣ್ಯ ಮತ್ತು ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಮಾದಕ ವಸ್ತು ಗಾಂಜಾ ಮಾರಾಟ, ಸಾಗಟ, ಸಂಗ್ರಹಣೆ ಮತ್ತು ಬೆಳೆಯುವವರ ವಿರುದ್ಧ ಪೊಲೀಸ್ ಇಲಾಖೆಯಿಂದ ನಿರ್ದಾಕ್ಷಿಣ್ಯ ಮತ್ತು ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದ್ದು, ಗಾಂಜಾ ಮಾರಾಟ, ಸಾಗಟ, ಸಂಗ್ರಹಣೆ ಮತ್ತು ಬೆಳೆಯುವ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ತಿಳಿದುಬಂದಲ್ಲಿ, ಪೊಲೀಸ್ ಇಲಾಖೆಗೆ ಮಾಹಿತಿಯನ್ನು ನೀಡಿ ಸಹಕರಿಸಿ, ಮಾಹಿತಿ ನೀಡಿದವರ ವಿವರವನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-೧ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-೨ ಎ ಜಿ ಕಾರ್ಯಪ್ಪ , ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು, ಮೇ|| ಶುಶ್ರುತ ಬಯೋ ಮೆಡಿಕಲ್ ವೇಸ್ಟ್ ಮ್ಯಾನೇಜ್ ಮೆಂಟ್ ಪ್ರೈವೇಟ್ ಲಿಮಿಟೆಡ್ ಸೊಸೈಟಿಯ ಡಾ|| ಗಿರೀಶ್ ಸಿ. ಎಸ್, ಡಾ|| ಹರೀಶ್ ದೆಲಂತ ಬೆಟ್ಟು, ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ ಎ ಉಪವಿಭಾಗ ಬಾಬು ಆಂಜನಪ್ಪ, ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ ಬಿ ಉಪವಿಭಾಗ ಸುರೇಶ್ ಎಂ , ಕ್ಷೇತ್ರ ಸಹಾಯಕರು, ವಿನಾಯಕ್ ಬಿ ಆರ್ ಮತ್ತಿತರರಿದ್ದರು.
