ಶಿವಮೊಗ್ಗ : ಫೆಬ್ರವರಿ ೧೨ : : ಸರ್ಕಾರದ ಮಾರ್ಗಸೂಚಿಯಂತೆ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು, ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಹಾಗೂ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ “ಸಾಂಸ್ಕೃತಿಕ ನಾಯಕ” ರಾದ ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಕೂಡಲೇ ಅಳವಡಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.
ಈ ಸಂಬಂಧ ಅವರು ಇಂದು ಪತ್ರಿಕಾ ಹೇಳಿಕೆ ಬಿಡುಗಡೆಗೊಳಿಸಿದ್ದು, ಫೆಬ್ರವರಿ ೧೭ರಂದು ಜಿಲ್ಲೆಯ ಎಲ್ಲಾ ಕಚೇರಿಗಳಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು “ಸಾಂಸ್ಕೃತಿಕ ನಾಯಕ”ರಾದ ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸುವ ಕಾರ್ಯಕ್ರಮವನ್ನು ಆಯೋಜಿಸಲು ಹಾಗೂ ತಮ್ಮ ವ್ಯಾಪ್ತಿಯ ಅಧೀನ ಕಚೇರಿಗಳಿಗೆ ಕಾರ್ಯಕ್ರಮವನ್ನು ಆಯೋಜಿಸಲು ಹಾಗೂ ಎಲ್ಲಾ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಈ ಭಾವಚಿತ್ರವನ್ನು ಕಡ್ಡಾಯವಾಗಿ ಅಳವಡಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.


ಅಳವಡಿಸಲಾಗುವ ಭಾವಚಿತ್ರದಲ್ಲಿ ’ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಎಂಬ ಅಡಿಬರಹ ಮುದ್ರಿಸಿ ಅಳವಡಿಸಲು ಕ್ರಮವಹಿಸಬೇಕು. ಬಸವಣ್ಣನವರ ಭಾವಚಿತ್ರದ ಡಿಜಿಟಲ್ ಪ್ರತಿಯನ್ನು hಣಣಠಿs://ಞಚಿಟಿಟಿಚಿಜಚಿsiಟಿi.ಞಚಿಡಿಟಿಚಿಣಚಿಞಚಿ gov.iಟಿ ಮೂಲಕವೂ ನಕಳಿಸಿಕೊಳ್ಳಬಹುದಾಗಿದೆ ಎಂದವರು ತಿಳಿಸಿದ್ದಾರೆ.
ಶ್ರೀ ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಸನ್ಮಾನ್ಯ ಮುಖ್ಯಮಂತ್ರಿಗಳು ಫೆಬ್ರವರಿ ೧೩ರಂದು ವಿಧಾನಸೌಧದಲ್ಲಿ ಅನಾವರಣಗೊಳಿಸಲಿದ್ದಾರೆ. ಅದರಂತೆ ಫೆಬ್ರವರಿ ೧೭ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ, ತಾಲ್ಲೂಕು ಕೇಂದ್ರಗಳಲ್ಲಿ ಸ್ಥಳೀಯ ಶಾಸಕರುಗಳ ನೇತೃತ್ವದಲ್ಲಿ ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸುವ ಕಾರ್ಯಕ್ರಮವನ್ನು ಆಯೋಜಿಸುವಂತೆ ಅವರು ಸೂಚಿಸಿದ್ದಾರೆ.


೧೨ನೇ ಶತಮಾನದಲ್ಲಿ ಕ್ರಾಂತಿಯೋಗಿ ಶ್ರೀ ಜಗಜ್ಯೋತಿ ಬಸವಣ್ಣನವರು ಪ್ರತಿಪಾದಿಸಿದ ಸಾರ್ವತ್ರಿಕ ಮೌಲ್ಯಗಳಾದ ಜಾತಿ ರಹಿತ ಸಮಾಜ, ಕಾಯಕದ ಮಹತ್ವ ಮತ್ತು ವರ್ಗರಹಿತ ಸಮಾಜ ಜೀವನ ಮಾರ್ಗ ಸರ್ವಕಾಲಕ್ಕೂ ದಾರಿದೀಪವಾಗಿದೆ. ಸಮಾಜದಲ್ಲಿ ಮಹಿಳಾ ಅಸಮಾನತೆ ಹಾಗೂ ಮೂಡನಂಬಿಕೆಗಳ ಬಗ್ಗೆ ವಿರೋಧ ವ್ಯಕ್ತಪಡಿಸಿರುತ್ತಾರೆ. ಅಲ್ಲದೇ, ಜಗಜ್ಯೋತಿ ಬಸವಣ್ಣನವರು

ಸಾರ್ವತ್ರಿಕ ಮತ್ತು ಸರ್ವಕಾಲಿಕ ಸರ್ವಜನ ಸಮಭಾವದ ತಾತ್ವಿಕತೆಗಳ ಮೂಲಕ ಕಲ್ಯಾಣ ಸಮಾಜವನ್ನು ಕಟ್ಟುವುದಕ್ಕೆ ಬೇಕಾದ ನೀತಿಯನ್ನು ಬೋಧಿಸಿರುವುದರಿಂದ ನಮ್ಮ ದೇಶದ ಸಂವಿಧಾನದ ಆಶಯಗಳಿಗೆ ಅವರ ಚಿಂತನೆಗಳು ಸಾಂಸ್ಕೃತಿಕ ರಾಯಭಾರಿತ್ವಕ್ಕೆ ಸಮರ್ಥನೀಯವಾದ ನೆಲೆ ಒದಗಿಸಿರುವ ಮೇರೆಗೆ ಶ್ರೀ ಜಗಜ್ಯೋತಿ ಬಸವಣ್ಣನವರನ್ನು “ಕರ್ನಾಟಕದ ಸಾಂಸ್ಕೃತಿಕ ನಾಯಕ” ಎಂದು ಸರ್ಕಾರ ಘೋಷಿಸಿರುವುದಾಗಿ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

By admin

ನಿಮ್ಮದೊಂದು ಉತ್ತರ

error: Content is protected !!