*
ಶಿವಮೊಗ್ಗ, ಫೆಬ್ರವರಿ 14
      ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸಖಿ ಒನ್ ಸ್ಟಾಪ್ ಸೆಂಟರ್, ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಹಾಗೂ ಎಫ್‍ಪಿಎಐ ಸಂಸ್ಥೆ ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಫೆ.13 ರಂದು ಮೇಲಿನ ಹನಸವಾಡಿಯ ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ(ಮಗಳನ್ನು ರಕ್ಷಿಸಿ ಮಗಳನ್ನು ಓದಿಸಿ) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.


     ಕಾರ್ಯಕ್ರಮದಲ್ಲಿ ಮಹಿಳೆಯರ ಮತ್ತು ಮಕ್ಕಳ ಸುರಕ್ಷತೆಗಾಗಿ ಇರುವ ಕಾಯ್ದೆಗಳು, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ, ಮಕ್ಕಳ ಸಹಾಯವಾಣಿ, ಮಕ್ಕಳ ಹಕ್ಕು, ವೈಯಕ್ತಿಕ ಸ್ವಚ್ಚತೆ, ಹದಿಹರೆಯದವರ ಸಮಸ್ಯೆಗಳು ಹಾಗೂ ಇನ್ನಿತರ ಮಕ್ಕಳ ಯೋಜನೆಗಳ ಕುರಿತು ಶಾಲೆಯ ಮಕ್ಕಳಿಗೆ ಅರಿವು ಮೂಡಿಸಲಾಯಿತು.


     ಕಾರ್ಯಕ್ರಮದ ಉದ್ಘಾಟನೆಯನ್ನು ಶಿವಮೊಗ್ಗದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯ ಮೇಲ್ವಿಚಾರಕರಾದ ಮಹಾದೇವಿ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು  ವಸತಿ ಶಾಲೆ ಪ್ರಾಂಶುಪಾಲರಾದ ತೇಜಸ್ವಿನಿ ಪ್ರಾಂಶುಪಾಲರು ವಹಿಸಿದ್ದರು. ಮುಖ್ಯ ಅಥಿತಿಗಳಾಗಿ ಶಿವಮೊಗ್ಗ ಫ್ಯಾಮಿಲಿ ಪ್ಲ್ಯಾನಿಂಗ್ ಅಸೋಸಿಯೇಷನ್  ಮಾಜಿ ಅಧ್ಯಕ್ಷೆ ಪುಷ್ಪ ಶೆಟ್ಟಿ, ಜಿಲ್ಲಾ

ಮಕ್ಕಳ ರಕ್ಷಣಾ ಘಟಕದ ಸಮಾಜ ಕಾರ್ಯಕರ್ತ ಭರತ್ ಎಸ್ ಎಂ, ಸಖಿ ಒನ್ ಸ್ಟಾಪ್ ಸೆಂಟರ್ ವಕೀಲರಾದ ಶ್ರೀಮತಿ ವಿನ್ನಿ, ಮಕ್ಕಳ ಸಹಾಯವಾಣಿ ಕೇಂದ್ರದ ಸಂಯೋಜಕರಾದ ಪ್ರಮೋದ್ ಪಾಲ್ಗೊಂಡಿದ್ದರು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ತಿಳಿಸಿದ್ದಾರೆ.

By admin

ನಿಮ್ಮದೊಂದು ಉತ್ತರ

error: Content is protected !!