ಶಿವಮೊಗ್ಗ,ಫೆ.೨೧: ಸ್ಕ್ವಾಯ್ ಅಸೋಸಿಯೇಷನ್ ಆಫ್ ಕರ್ನಾಟಕದ ವತಿಯಿಂದ ಇದೇ ಮೊದಲ ಬಾರಿಗೆ ಶಿವಮೊಗ್ಗದಲ್ಲಿ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಮಾರ್ಚ್. ೩ರಂದು ರಾಜ್ಯಮಟ್ಟದ ಖೆಲೋ ಇಂಡಿಯಾ ವುಮೆನ್ಸ್ ಲೀಗ್ (ಅಸ್ಮಿತಾ) ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಆಲಿ ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು ೧೦೦ಕ್ಕೂ ಹೆಚ್ಚು ಕ್ರೀಡಾಪಟುಗಳು ಈ ಸ್ಕ್ವಾಯ್ ಮಾರ್ಷಲ್ ಆರ್ಟ್ಸ್ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿದ್ದು, ಜಿಲ್ಲೆಯಿಂದ ೫ ಬಾಲಕಿಯರು ಭಾಗವಹಿಸುತ್ತಿದ್ದಾರೆ. ಇದು ಹೆಣ್ಣುಮಕ್ಕಳಿಗೆ ಮಾತ್ರ ನಡೆಯುವ ಸ್ಪರ್ಧೆಯಾಗಿದೆ. ನುರಿತ ತೀರ್ಪುಗಾರರು ಭಾಗವಹಿಸಲಿದ್ದಾರೆ ಎಂದರು.
ಉಪಾಧ್ಯಕ್ಷ ಶಿವಮೊಗ್ಗ ವಿನೋದ್ ಮಾತನಾಡಿ, ಸ್ಕ್ವಾಯ್ ಮಾರ್ಷಲ್ ಆರ್ಟ್ಸ್ ಕ್ರೀಡೆಯು ಭಾರತ ಸರಕಾರದಿಂದ ಮಾನ್ಯತೆ ಪಡೆದಿದೆ. ಕೇಂದ್ರ ಸರ್ಕಾರ ೨೦೧೭ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಕ್ರೀಡೆಯನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಖೆಲೋ ಇಂಡಿಯಾ ಕ್ರೀಡೆಗಳನ್ನು ದೇಶದಲ್ಲಿ ಆರಂಭಿಸಿದರು. ಮಹಿಳಾ ಸಬಲೀಕರಣ ದೃಷ್ಠಿಯಿಂದ ಖೆಲೋ ಇಂಡಿಯಾ ವುಮೆನ್ಸ್ ಲೀಗ್ನ್ನು ಪ್ರಾರಂಭಿಸಲಾಗಿದೆ ಎಂದರು.
ಕೇಂದ್ರ ಕ್ರೀಡಾ ಸಚಿವರು ಇದಕ್ಕೆ ಅಸ್ಮಿತಾ ಎಂದು ನಾಮಕರಣ ಮಾಡಿದ್ದಾರೆ. ಇದೊಂದು ಸಮರ ಕಲೆಯಾಗಿದ್ದು, ಶಿವಮೊಗ್ಗದಲ್ಲಿ ಮೊದಲ ಬಾರಿಗೆ ನಡೆಯುತ್ತಿದೆ ಮುಖ್ಯವಾಗಿ ೨ ವಿಭಾಗಗಳಲ್ಲಿ ಮತ್ತು ವಿವಿಧ ತೂಕದ ವಿಭಾಗದಲ್ಲಿ ಸ್ಪರ್ಧೆಗಳು ನಡೆಯಲಿವೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ವಕೀಲ ಡಿ.ಬಿ.ಚಂದ್ರಕುಮಾರ್, ಶರವಣ, ನವೀನ್, ಶೇಖರ್, ಮಂಜುನಾಥ್ ಇದ್ದರು.