ಶಿವಮೊಗ್ಗ, ಫೆ ೨೧; : ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ಕರ್ನಾಟ ಕೌಸಲ್ಯ ಅಭಿವೃದ್ದಿ ನಿಗಮದ ವತಿಯಿಂದ ಫೆ. ೨೬ ಮತ್ತು ೨೭ ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ನರ್ಸಿಂಗ್,
ಯಾವುದೇ ತಾಂತ್ರಿಕ, ತಾಂತ್ರಿಕೇತರ, ಪದವಿ, ಸ್ನಾತಕೋತ್ತರ ಪದವಿಯಲ್ಲಿ ಪಾಸ್/ಫೇಲ್ ಆದ ಅಭ್ಯರ್ಥಿಗಳು ತಮ್ಮ ಹೆಸರನ್ನು ಆನ್ಲೈನ್ನಲ್ಲಿ ನೋಂದಾಯಿಸಿಕೊಳ್ಳುವುದು.
೫೦ ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶಗಳು ವಿವಿಧ ಕ್ಷೇತ್ರಗಳಲ್ಲಿ ಲಭ್ಯವಿದ್ದು, ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶವಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ವೆಬ್ಸೈಟ್
https://skillconnect.kaushalkar.comಚಿಟಞಚಿಡಿ.ಛಿom ಲಿಂಕ್ನಲ್ಲಿ ನೋಂದಾಯಿಸಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸುವಂತೆ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಸುರೇಶ್ ಹೆಚ್ ಎಂ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ: ೦೮೧೮೨-೨೫೫೨೯೪, ಮೊ.ಸಂ: ೮೩೧೦೨೮೫೭೯೯ ಅಥವಾ ಸಹಾಯವಾಣಿ ಸಂಖ್ಯೆ ೧೮೦೦೫೯೯೯೯೧೮ (ವಿಸ್ತರಣಾ ಸಂಖ್ಯೆ-೪) ನ್ನು ಸಂಪರ್ಕಿಸುವುದು.