ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಿವಮೊಗ್ಗ., ಸಮನ್ವಯ ಅಧಿಕಾರಿಗಳ ಕಚೇರಿ, ಶಿವಮೊಗ್ಗ. ಹಾಗೂ ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ನಿನ್ನೆ ದಿನ ನಡೆದ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಲಾಗಿದ್ದ ಶಿವಮೊಗ್ಗ ತಾಲ್ಲೂಕು ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಿಗಾಗಿ ಎರಡನೇ ತ್ರೈಮಾಷಿಕ ಮೌಲ್ಯಾಂಕನ ಪರೀಕ್ಷೆಯ ಬಗ್ಗೆ ಕಾರ್ಯಗಾರವನ್ನು ಹಮ್ಮಿಕೊಂಡಿದ್ದು,
ಈ ಸಂದರ್ಭದಲ್ಲಿ ಸಂಘದ ವತಿಯಿಂದ ಶಿವಮೊಗ್ಗ ಟಿಪ್ಪು ನಗರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಡಿ.ಪಿ. ರವಿಕುಮಾರ್ ಅವರು ಕಳೆದ 33 ವರ್ಷಗಳಿಂದ ಶಿವಮೊಗ್ಗದ ವಿವಿಧ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಾ ಬಂದಿದ್ದು,
ಅವರ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ, ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿರುವುದರಿಂದ, ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲಿ ಎಂದು ಶಿವಮೊಗ್ಗದ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ಸನ್ಮಾನಿ ಸಿ, ಗೌರವiಸಲಾಯಿತು.
ಸಂಘದ ಅಧ್ಯಕ್ಷ ಲಕ್ಷ್ಮಣ್, ಕಾರ್ಯದರ್ಶಿ ಆನಂದ್, ಜಿಲ್ಲಾ ಪ್ರಾಥಮಿಕ ಶಾಲಾ ಸಂಘದ ಅಧ್ಯಕ್ಷ ರುದ್ರಪ್ಪ, ತಾಲ್ಲೂಕು ಸಂಘದ ಅಧ್ಯಕ್ಷ ದಿನೇಶ್ ಮತ್ತು ಗಿರೀಶ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.