ಇದನ್ನೂ ಓದಿ-

https://tungataranga.com/?p=28588
ಶಿವಮೊಗ್ಗದಲ್ಲಿ ಪೊಲೀಸರಿಗೂ ಮಾಸ್ ಪಿ ಟಿ ಮಾಡಿಸ್ತಾರಾ? /ಪೆಂಡಿಗ್ ಕೇಸ್ ಇತ್ಯರ್ಥ ವಿಳಂಬ/ ಹೆಚ್ ಸಿ, ಎಎಸ್ಐಗೆ ಕಿರಿಕಿರಿ ಯಾಕೆ? ಇದು ಎಲ್ಲಾ ಪೊಲೀಸರನ್ನು ಕಾಡುವ ಪ್ರಶ್ನೆ
ಮೇಲಿನ ಲಿಂಕ್ ಬಳಸಿ ಸಮಗ್ರ ಸುದ್ದಿ ಓದಿ
ತುಂಗಾತರಂಗ ಗುಂಪಲ್ಲಿ ಇಲ್ಲದವರು ಮಾತ್ರ ಇಲ್ಲಿ ಸೇರಿ
https://chat.whatsapp.com/IfzS7EYxWKFKOsXRK2eMsI

ಶಿವಮೊಗ್ಗ, ಮಾ.8:
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಗೆ ಶಿವಮೊಗ್ಗದ FTSC-1 ನ್ಯಾಯಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿದೆ.


ಸಮಗ್ರ ಮಾಹಿತಿ:
2021ನೇ ಸಾಲಿನಲ್ಲಿ ಸೊರಬ ತಾಲ್ಲೂಕಿನ ವಾಸಿ 35 ವರ್ಷದ ವ್ಯಕ್ತಿಯು 14 ವರ್ಷದ ಅಪ್ರಾಪ್ತ ವಯ್ಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದು, ಈ ಬಗ್ಗೆ ನೊಂದ ಬಾಲಕಿಯು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿರುತ್ತದೆ.
ಸದರಿ ಪ್ರಕರಣದಲ್ಲಿ ಆಗಿನ ತನಿಖಾಧಿಕಾರಿಗಳಾದ ರಾಜಶೇಖರ್ ಎಲ್, ಪೊಲೀಸ್ ವೃತ್ತ ನಿರೀಕ್ಷಕರು, ಸೊರಬ ವೃತ್ತ ರವರು ಆರೋಪಿತನ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿರುತ್ತಾರೆ.


ಪ್ರಕರಣದಲ್ಲಿ ಸರ್ಕಾರದ ಪರವಾಗಿ ಹರಿಪ್ರಸಾದ್, ವಿಶೇಷ ಸರ್ಕಾರಿ ಅಭಿಯೋಜಕರವರು ವಾದ ಮಂಡಿಸಿದ್ದು, ಶಿವಮೊಗ್ಗದ FTSC-1 ನ್ಯಾಯಲಯದಲ್ಲಿ ಪ್ರಕರಣದ ವಿಚಾರಣೆ ನಡೆದು, ಆರೋಪಿ ವಿರುದ್ಧ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ, ನ್ಯಾಯಾಧಿಶರಾದ ಶ್ರೀಮತಿ ಲತಾ ರವರು ದಿನಾಂಕಃ 06-03-2024 ರಂದು ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 60,000/- ರೂ ದಂಡ, ದಂಡ ಕಟ್ಟಲು ವಿಫಲನಾದಲ್ಲಿ ಹೆಚ್ಚುವರಿ 4 ತಿಂಗಳು ಸಾಧಾ ಕಾರಾವಾಸ ಶಿಕ್ಷೆ ವಿಧಿಸಿದ್ದು ಮತ್ತು ದಂಡದ ಮೊತ್ತದಲ್ಲಿ 50,000/- ರೂ ಹಾಗೂ ಸರ್ಕಾರದಿಂದ 4,00,000/- ರೂ ಸೇರಿ ಒಟ್ಟು 4,50,000/- ರೂ ಗಳನ್ನು ನೊಂದ ಬಾಲಕಿಗೆ ಪರಿಹಾರವಾಗಿ ನೀಡಲು ಆದೇಶಿಸಿರುತ್ತಾರೆ.

By admin

ನಿಮ್ಮದೊಂದು ಉತ್ತರ

You missed

error: Content is protected !!