ಶಿವಮೊಗ್ಗ,ಮಾ.೧೪:ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಶಿವಮೊಗ್ಗ ಜಿಲ್ಲಾ ಮಟ್ಟದ ಅಧ್ಯಕ್ಷರನ್ನಾಗಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯ ದರ್ಶಿ ಮತ್ತು ಆಡಳಿತ ಉಸ್ತು ವಾರಿಯಾಗಿ
ಸಿ.ಎಸ್. ಚಂದ್ರ ಭೂಪಾಲ ಅವರನ್ನು ಪ್ರಾಧಿ ಕಾರದ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಿ.ಎಸ್.ಚಂದ್ರಭೂಪಾಲರವರು ಕಾಂಗ್ರೆಸ್ ಪಕ್ಷದಲ್ಲಿ ಹಿರಿಯ ಕಾರ್ಯಕರ್ತರಾಗಿ ನಿತ್ಯಾ ಕಾಂಗ್ರೆಸ್ ಸಂಘಟನೆಯಲ್ಲಿ ಸಕ್ರಿಯವಾಗಿ ಕಾರ್ಯನಿಸುತ್ತಿ ದ್ದಾರೆ . ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಸಂಯೋಜಕರಾಗಿ ಮತ್ತು ಅಹಿಂದ ಸಂಘಟನೆಯಜಿಲ್ಲಾ ಅಧ್ಯಕ್ಷರಾಗಿ ಸಾರ್ವಜನಿಕರ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಶಕ್ತಿ, ಗೃಹ ಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮೀ ಮತ್ತು ಯುವನಿಧಿ ಯೋಜನೆಗಳು ಈಗಾಗ ಲೇ ರಾಜ್ಯದಲ್ಲಿ ಜಾರಿಗೊಂಡಿದ್ದು ಈ ಐದು ಗ್ಯಾರಂಟಿ ಯೋಜನೆಯ ಲಾಭವು ಅರ್ಹ ಫಲಾನುಭವಿ ಗಳಿಗೆ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ರಾಜ್ಯ ಮತ್ತು ಜಿಲ್ಲಾ ಹಾಗೂ ತಾಲೂಕ ಮಟ್ಟದಲ್ಲಿ ಐದು ಗ್ಯಾರಂಟಿ ಗಳು ಯೋಜನೆಗಳ ಅನುಷ್ಠಾನ ಪ್ರಾಧಿ ಕಾರವನ್ನು ರಾಜ್ಯ ಸರ್ಕಾರ ರಚನೆ ಮಾಡಿ
ಶಿವಮೊಗ್ಗ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಗಳು ಅನುಷ್ಠಾನ ಪ್ರಾಧಿಕಾರಕ್ಕೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು, ಸದಸ್ಯರುಗಳನ್ನು ಸರ್ಕಾರ ನೇಮಕ ಮಾಡಿದೆ ಈ ಪ್ರಾಧಿಕಾರದ ಸದಸ್ಯ ಕಾರ್ಯ ದರ್ಶಿಯಾಗಿ ಶಿವಮೊಗ್ಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಗಳು ಕಾರ್ಯನಿರ್ವಹಿಸುತ್ತಾರೆ.