ಶಿವಮೊಗ್ಗ :  ವಿದ್ಯಾರ್ಥಿಗಳಿಗೆ ಗುಣಮಟ್ಟದ ಉನ್ನತ ಶಿಕ್ಷಣ ನೀಡಲು ಪೂರಕವಾದ ವಾತಾವರಣ ರೂಪಿಸಲು‌ ಅಗತ್ಯ ಕ್ರಮ ವಹಿಸಬೇಕು ಎಂದು ಪ್ರಾದೇಶಿಕ ಜಂಟಿ ನಿರ್ದೇಶಕ ಕಚೇರಿಯ ಜಂಟಿ ನಿರ್ದೇಶಕ ಡಾ. ವಿಷ್ಣುಮೂರ್ತಿ ಕೆ.ಎ.  ಅಭಿಪ್ರಾಯಪಟ್ಟರು.

ದೇಶಿಯ ‌ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಸಿಂಗಾರ ಸಭಾಂಗಣದಲ್ಲಿ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಕಾಲೇಜಿನ ಆಂತರಿಕ ಗುಣಮಟ್ಟ ಕೋಶದ ವತಿಯಿಂದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಿದ್ದ ” ಶಿಕ್ಷಣದಲ್ಲಿ ಉತ್ಕೃಷ್ಟತೆ , ಉನ್ನತ ಶಿಕ್ಷಣದಲ್ಲಿ ಗುಣಮಟ್ಟದ ಉಪಕ್ರಮಗಳನ್ನು ಹಾಗೂ ಕಚೇರಿ ವಿಧಾನಗಳನ್ನು ಅನ್ವೇಷಿಸುವುದು ” ಕುರಿತು ಒಂದು ‌ದಿನದ‌ ರಾಜ್ಯ ಮಟ್ಟದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಗುಣಮಟ್ಟ ನಿರಂತರವಾಗಿ ಕಾಯ್ದುಕೊಳ್ಳುವ ಪ್ರಕ್ರಿಯೆ. ಪ್ರತಿ ವರ್ಷ ವಿದ್ಯಾರ್ಥಿಗಳಿಂದ ಅಗತ್ಯ ಅಭಿಪ್ರಾಯ ‌ಸಂಗ್ರಹಿಸಿ‌ ಸೂಕ್ತ ಬದಲಾವಣೆಗಳನ್ನು ‌ಮಾಡಿಕೊಳ್ಳುವ ಮೂಲಕ ಗುಣಮಟ್ಟ ಹೆಚ್ಚಿಸಿಕೊಳ್ಳುವತ್ತ ಗಮನ‌ ಹರಿಸಬೇಕು. ವಿದ್ಯಾರ್ಥಿಗಳಿಗೆ ಕಲಿಕಾ ಚಟುವಟಿಕೆಗಳಲ್ಲಿ‌ ಹೆಚ್ಚು ತೊಡಗಿಸಿಕೊಳ್ಳುವಂತೆ ಆಸಕ್ತಿ ಬೆಳೆಸಬೇಕು ಎಂದು ತಿಳಿಸಿದರು.

ದೇಶಿಯ ವಿದ್ಯಾಶಾಲಾ ಸಮಿತಿಯ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ ಮಾತನಾಡಿ, ಶಿಕ್ಷಣದಲ್ಲಿ ಆಧುನಿಕ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಅಳವಡಿಸಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಬೇಕು. ಬೋಧನಾ ಕ್ರಮದಲ್ಲಿ ಹೊಸ‌ ಹೊಸ‌ ವಿಧಾನಗಳನ್ನು ಅನುಷ್ಠಾನಗೊಳಿಸಬೇಕು ಎಂದು ಸಲಹೆ ನೀಡಿದರು.

ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿ, ಉತ್ತಮ ವಿಷಯಗಳ ಆಯ್ಕೆ ಹಾಗೂ ಸುಂದರ ಸಮಾಜ‌ ನಿರ್ಮಾಣ ಮಾಡುವ ಮನೋಭಾವವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಬೇಕು. ಶಿಕ್ಷಣ ವ್ಯವಸ್ಥೆಯಲ್ಲಿ ಆಗುವ ಬದಲಾವಣೆಗಳನ್ನು ‌ಗಮನಿಸಬೇಕು ಎಂದು ತಿಳಿಸಿದರು.

ತೀರ್ಥಹಳ್ಳಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಐಕ್ಯೂಎಸಿ ಸಂಯೋಜಕ ಡಾ. ವಾಸೀಂ ಅಕ್ರಂ, ಚನ್ನಗಿರಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಐಕ್ಯೂಎಸಿ‌‌ ಸಂಯೋಜಕ ಡಾ. ವಿಜಯಕುಮಾರ್ ಎನ್.ಸಿ. ಸಂಪನ್ಮೂಲ ವ್ಯಕ್ತಿಗಳಾಗಿ ಉಪನ್ಯಾಸ ನೀಡಿದರು.

ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಐಕ್ಯೂಎಸಿ ಸಂಯೋಜಕ ‌ಪ್ರೊ. ಎನ್.ಕುಮಾರಸ್ವಾಮಿ, ಎಟಿಎನ್ ಸಿಸಿ ಕಾಲೇಜಿನ ಪ್ರಾಚಾರ್ಯೆ ಪ್ರೊ . ಮಮತಾ ಪಿ.ಆರ್.  , ಡಯಾನ ಎ.ಡಿಬಾರ್ಟ್, ಸಂಹಿತಾ ಭಾರ್ಗವ್.ಆರ್. , ಕಾಲೇಜಿನ ಸಿಬ್ಬಂದಿ , ಉಪನ್ಯಾಸಕರು ಹಾಜರಿದ್ದರು.

By admin

ನಿಮ್ಮದೊಂದು ಉತ್ತರ

You missed

error: Content is protected !!