ಬೆಂಗಳೂರು,ಮಾ.22 : ನಟ ಶಿವರಾಜ್ ಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ಒಬಿಸಿ ಮೋರ್ಚಾ ದೂರು ನೀಡಿದೆ.


ನಟ ಶಿವರಾಜ್ ಕುಮಾರ್ ಅವರು ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಪರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಆದ್ದರಿಂದ ಅವರ ಸಿನಿಮಾ, ಜಾಹೀರಾತುಗಳನ್ನು ನಿಷೇಧ ಮಾಡಬೇಕು ಎಂದು ಚುನಾವಣಾ ಆಯೋಗಕ್ಕೆ ಬಿಜೆಪಿ ಒಬಿಸಿ ಮೋರ್ಚಾ ದೂರು ನೀಡಿದೆ.


ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅಧಿಕೃತವಾಗಿ ಪ್ರಚಾರ ಆರಂಭಿಸಿದ್ದಾರೆ. ಪತ್ನಿಯ ಚುನಾವಣಾ ಪ್ರಚಾರಕ್ಕೆ ನಟ ಶಿವರಾಜ್ ಕುಮಾರ್ ಕೂಡ ಸಾಥ್ ನೀಡಿದ್ದರು. ಭದ್ರಾವತಿಯಿಂದ ಪ್ರಚಾರ ಆರಂಭಿಸಿದ ಗೀತಾ ಶಿವರಾಜ್ ಕುಮಾರ್ ತಮಗೆ ಮತ ಹಾಕುವಂತೆ ಮತಯಾಚನೆ ಮಾಡಿದ್ದರು. ರ್ಯಾಲಿಯಲ್ಲಿ ಶಿವರಾಜ್ ಕುಮಾರ್, ಸಚಿವ ಮಧು ಬಂಗಾರಪ್ಪ, ಶಾಸಕರಾದ ಬಿ.ಕೆ. ಸಂಗಮೇಶ್ವರ್, ಬೇಳೂರು ಗೋಪಾಲಕೃಷ್ಣ ಹಾಗೂ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಮತ್ತಿತರರಿದ್ದರು.
(ಸಂ)

By admin

ನಿಮ್ಮದೊಂದು ಉತ್ತರ

You missed

error: Content is protected !!