ಬೆಂಗಳೂರು,ಡಿ.3 :
ಇತ್ತೀಚಿಗೆ ನಡೆದ ರಾಜ್ಯದ ಎರಡು ಹಂತಗಳ ಗ್ರಾಮ ಪಂಚಾಯ್ತಿಗಳ ಚುನಾವಣಾ ಫಲಿತಾಂಶ ಪ್ರಕಟಗೊಂಡಿದೆ. ಈ ಬಳಿಕ ರಾಜ್ಯ ಚುನಾವಣಾ ಆಯೋಗವು ರಾಜ್ಯದ 5,956 ಗ್ರಾಮ ಪಂಚಾಯ್ತಿಗಳಿಗೆ ಅನುಸೂಚಿತ ಜಾತಿ, ಅನುಸೂಚಿತ ಪಂಗಡ, ಹಿಂದುಳಿದ ವರ್ಗ(ಅ), ಹಿಂದುಳಿದ ವರ್ಗ(ಬ) ಮತ್ತು ಸಾಮಾನ್ಯ ವರ್ಗಗಳಗೆ ಹಾಗೂ ಈ ಪ್ರವರ್ಗಗಳಲ್ಲಿ ಮಹಿಳೆಯರಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳ ಸಂಖ್ಯೆಗಳನ್ನು, ನಿಗದಿ ಪಡಿಸಿ, ರಾಜ್ಯ ಚುನಾವಣಾ ಆಯೋಗ ಗೆಜೆಟ್ ಅಧಿಸೂಚನೆಯಲ್ಲಿ ಪ್ರಕಟಿಸಿದೆ.
ಈ ಕುರಿತಂತೆ ಗೆಜೆಟ್ ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಚುನಾವಣಾ ಆಯೋಗವು, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಹುದ್ದೆಗಳನ್ನು ಆಯಾಯ ತಾಲೂಕಿನ ಜನಸಂಖ್ಯೆಯ ಆಧಾರದ ಮೇಲೆ ನಿಗದಿ ಪಡಿಸಿದೆ.
2020ನೇ ಸಾಲಿನ ಚುನಾವಣೆ ಮುಗಿದ ನಂತ್ರ 30 ತಿಂಗಳ ಮೊದಲನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳನ್ನು ಈ ಕೆಳಗಿಂತೆ ನಿಗಧಿ ಪಡಿಸಿ ರಾಜ್ಯ ಸರ್ಕಾರ ಗೆಜೆಟ್ ನೋಟಿಫಿಕೇಷನ್ ನಲ್ಲಿ ಪ್ರಕಟಿಸಿದೆ.

By admin

ನಿಮ್ಮದೊಂದು ಉತ್ತರ

error: Content is protected !!