ಶಿವಮೊಗ್ಗ, ಮಾರ್ಚ್ 24
ಲೋಕಸಭಾ ಚುನಾವಣೆ ಹಿನ್ನೆಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿಯಾಗಿದ್ದು ಮಾ.23 ರಂದು ವಿವಿಧ ಚೆಕ್‍ಪೋಸ್ಟ್‍ಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯವನ್ನು ಪೊಲೀಸ್ ಮತ್ತು ಅಬಕಾರಿ
ಇಲಾಖೆಯವರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿರುತ್ತಾರೆ. ಪೊಲೀಸ್ ಇಲಾಖೆ ವತಿಯಿಂದ ಸುಮಾರು 2488 ಮೊತ್ತದ 5.94 ಲೀ ಹಾಗೂ ಅಬಕಾರಿ ಇಲಾಖೆಯಿಂದ ಸುಮಾರು ರೂ. 5360 ಮೊತ್ತದ
10.72 ಲೀ ಒಟ್ಟು ರೂ 7448 ಮೊತ್ತದ 16.66 ಲೀ ಅಕ್ರಮ ಮದ್ಯ ವಶಪಡಿಸಿಕೊಂಡು ಇದಕ್ಕೆ ಸಂಬಂಧಿಸಿದಂತೆ 5 ಎಫ್‍ಐಆರ್ ದಾಖಲಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.