

ಶಿವಮೊಗ್ಗ,ಮಾ.31:
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವತಿಯಿಂದ ಚಿಕ್ಕಬಳ್ಳಾಪುರದ ಎಸ್.ಜೆ.ಸಿ.ಐ.ಟಿ ಕಾಲೇಜಿನಲ್ಲಿ ಏರ್ಪಡಿಸಿದ್ದ ರಾಜ್ಯ ಮಟ್ಟದ 23 ನೇ ಯುವ ಉತ್ಸವದಲ್ಲಿ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಎರಡನೇ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ.
ಯುವ ಉತ್ಸವದಲ್ಲಿ ಸಂಗೀತ, ನೃತ್ಯ, ರಂಗಭೂಮಿ, ಸಾಹಿತ್ಯ, ಲಲಿತ ಕಲೆ ಸೇರಿದಂತೆ 25 ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಬೆಂಗಳೂರು, ಮೈಸೂರು, ಕಲಬುರಗಿ, ಬೆಳಗಾವಿ ವಲಯಗಳ 70 ವಿವಿಧ ಎಂಜಿನಿಯರಿಂಗ್ ಕಾಲೇಜುಗಳಿಂದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಜೆ.ಎನ್.ಎನ್.ಸಿ.ಇ ವಿದ್ಯಾರ್ಥಿಗಳ ತಂಡ, ನಾಟಕ ಸ್ಪರ್ಧೆಯಲ್ಲಿ ಚಿನ್ನದ ಪದಕ, ಇನ್ಸ್ಟಾಲೇಷನ್ ಸ್ಪರ್ಧೆಯಲ್ಲಿ ಚಿನ್ನದ ಪದಕ, ಏಕಾಂಕ ನಾಟಕದಲ್ಲಿ ಬೆಳ್ಳಿ ಪದಕ, ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ ಸ್ಪರ್ಧೆಯಲ್ಲಿ ಬೆಳ್ಳಿ ಪದಕ, ಮಿಮಿಕ್ರಿ ಸ್ಪರ್ಧೆಯಲ್ಲಿ ಬೆಳ್ಳಿ ಪದಕ, ಕಾರ್ಟೂನ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ, ಜನಪದ ವಾದ್ಯವೃಂದ ಸ್ಪರ್ಧೆಯಲ್ಲಿ ಕಂಚು, ತಕ್ಷಣದ ಚಿತ್ರಕಲೆ ಸ್ಪರ್ಧೆಯಲ್ಲಿ ಕಂಚು, ರಂಗೋಲಿ ಸ್ಪರ್ಧೆಯಲ್ಲಿ ಕಂಚು, ಪೋಸ್ಟರ್ ಮೇಕಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದಿದ್ದಾರೆ.

ಕಾಲೇಜಿನ ಸಾಂಸ್ಕೃತಿಕ ಸಮಿತಿ ಸಂಯೋಜಕರಾದ ಮಧುಸೂದನ್.ಜಿ, ಸದಸ್ಯರಾದ ಹರೀಶ್ ಕುಮಾರ್.ಎ.ಸಿ, ಡಾ.ಸುಭದ್ರ, ಡಾ.ಶಶಿಕಿರಣ್.ಎಸ್.ಕೆ ವಿದ್ಯಾರ್ಥಿಗಳ ತಂಡವನ್ನು ಸಂಯೋಜಿಸಿದ್ದರು. ವಿದ್ಯಾರ್ಥಿಗಳ ಸಾಧನೆಗೆ ರಾಷ್ಟ್ರೀಯ ಶಿಕ್ಷಣ ಸಮಿತಿ ಆಡಳಿತ ಮಂಡಳಿ ಸದಸ್ಯರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

