ಶಿವಮೊಗ್ಗ,ಏ.1:
ಕರ್ನಾಟಕದಲ್ಲಿ ಸಂವಿಧಾನ ವಿರೋಧಿ ಮತ್ತು ಮಹಿಳಾ ವಿರೋಧಿ ಕಾಂಗ್ರೆಸ್ ಸರಕಾರ ಆಡಳಿತ ಮಾಡುತ್ತಿದೆ.
ಕಾಂಗ್ರೆಸ್ ಸರಕಾರ ಬಂದಾಗಲೆಲ್ಲ ಇಂಥ ಮಹಿಳಾ ವಿರೋಧಿ ಧೋರಣೆಗಳು ಕಾಣಿಸುತ್ತವೆ. ಯಾಕೆ ಹೀಗೆ ಎಂದು ರಾಜ್ಯ ಬಿಜೆಪಿ ಕಾರ್ಯದರ್ಶಿ ಮತ್ತು ಶಾಸಕ ಡಿ ಎಸ್ ಅರುಣ್ ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಸಚಿವ ಪ್ರಿಯಾಂಕ್ ಖರ್ಗೆಯವರು ಹಿಂದೆಯೂ ಮಹಿಳೆಯರು ಸರಕಾರಿ ಕೆಲಸ ಪಡೆಯಲು ಮಂಚ ಹತ್ತಬೇಕು ಎಂದಿದ್ದರು. ಈ ಮೂಲಕ ಇಡೀ ಮಹಿಳಾ ಸಮುದಾಯಕ್ಕೆ ಅವಮಾನ ಮಾಡಿದ್ದರು. ಇದೀಗ ಮಹಿಳೆಯರ ತಾಳಿ, ಕಾಲುಂಗುರ ತೆಗೆಸುವ ಕಾರ್ಯಕ್ಕೆ ಕೈಹಾಕಿದ್ದಾರೆ. ಇಂಥ ಅವಮಾನಕ್ಕೆ ಮಹಿಳೆಯರು ಭವಿಷ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿ ಸಮರ್ಥ ಉತ್ತರ ಕೊಡಲಿದ್ದಾರೆ.
ಪರೀಕ್ಷೆಗೆ ಬಂದ ಮಹಿಳೆಯರ ತಾಳಿ, ಕಾಲುಂಗುರ ತೆಗೆಸುತ್ತಾರೆ. ಹಿಂದುತ್ವ, ಹಿಂದೂ ಸಂಸ್ಕೃತಿಗೆ ಈ ಸರಕಾರ ಬೆಲೆ ಕೊಡುತ್ತಿಲ್ಲ. ಹಿಂದೂ ಮಹಿಳೆಯರ ಮಾಂಗಲ್ಯ ತೆಗೆಸುವ ದುಸ್ಸಾಹಸದ ಈ ಸರಕಾರದ ಮನಸ್ಥಿತಿ ಎಂಥದ್ದು ಎಂಬುದು ಅರ್ಥವಾಗುತ್ತದೆ. ಅಲ್ಪಸಂಖ್ಯಾತರ ತುಷೀಕರಣ ಮಾಡುವ ಈ ಸರಕಾರವು ಪರೀಕ್ಷೆಯಲ್ಲಿ ಹಿಜಾಬ್ ಧರಿಸಲು ಅವಕಾಶ ಕೊಡುತ್ತಿದೆ ಎಂದಿದ್ದಾರೆ.
ವಂಟಮೂರಿ ಗ್ರಾಮದಲ್ಲಿ ಮಹಿಳೆ ಮೇಲಿನ ದೌರ್ಜನ್ಯ, ನಗ್ನಗೊಳಿಸಿ ಕಂಬಕ್ಕೆ ಕಟ್ಟಿ ಥಳಿಸಿದ ಘಟನೆಯ ಖಂಡನೀಯ, ಇಂತ ಪ್ರಕರಣಗಳು ಕಾಂಗ್ರೆಸ್ ಆಡಳಿತದಲ್ಲಿ ಸಾಕಷ್ಟು ನಡೆದಿದ್ದು, ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದೆ ಕಾನೂನು ಸುವ್ಯವಸ್ಥೆ ಹದೆಗೆಟ್ಟಿದೆ..
ಇತ್ತೀಚಿನ ಕಾಂಗ್ರೆಸ್ ನಾಯಕರ ಹೇಳಿಕೆಗಳು ಸ್ತ್ರೀ / ಮಹಿಳಾ ವಿರೋಧಿ ಧೋರಣೆಯನ್ನ ತೋರಿಸುತ್ತದೆ ಎಂದರೆ ಪತ್ರಿಕಾ ಹೇಳಿಕೆಯಲ್ಲಿ ಆಕ್ಷೇಪಿಸಿದ್ದಾರೆ.
ಶಾಮನೂರು ಶಿವಶಂಕರಪ್ಪ, ಸುಪ್ರಿಯಾ ಶ್ರೀನಾತೆ ಅವರ ಹೇಳಿಕೆಗಳು ಕಾಂಗ್ರೆಸ್ ಪಕ್ಷದ ಸ್ತ್ರೀವಿರೋಧಿ ಮನಸ್ಥಿತಿಯ ಅಭಿವ್ಯಕ್ತಿಗೊಳಿಸುತ್ತದೆ.
ಶಾಮನೂರು ಶಿವಶಂಕರಪ್ಪ ಅವರು ‘ಮಹಿಳೆಯರು ಅಡುಗೆಮನೆಯಲ್ಲಿರಲು ಮಾತ್ರ ಲಾಯಕ್ಕು’ ಎಂಬ ರೀತಿಯಲ್ಲಿ ಮಾತನಾಡಿದ್ದಾರೆ. ಇದು ಅತ್ಯಂತ ವಿಷಾದನೀಯ ಮತ್ತು ಖಂಡನೀಯ ಎಂದು ಹೇಳಿದ್ದಾರೆ.
ಶಾಮನೂರು ಅವರ ಪಕ್ಷದ ‘ಮಹಿಳೆ ಈ ರಾಷ್ಟ್ರದ ಪ್ರಧಾನಿ ಆಗಿದ್ದರು. ಈಗ ಆ ಪಕ್ಷದಲ್ಲಿ ಪ್ರಿಯಾಂಕ ವಾದ್ರಾ ಮತ್ತು ಸೋನಿಯಾ ಗಾಂಧಿಯವರು ಕೆಲಸ ಮಾಡುತ್ತಿದ್ದಾರೆ. ಹೀಗಿರುವಾಗ ಮತ್ತೊಂದು ಪಕ್ಷದ ಅಭ್ಯರ್ಥಿ ಬಗ್ಗೆ ಆಗೌರವದ ಮಾತನಾಡುವುದು ಖಂಡನೀಯ ಎಂದಿದ್ದಾರೆ.
ನಮ್ಮ ಆದರಣೀಯ ಪ್ರಧಾನಿ ನರೇಂದ್ರ ಮೋದಿಯವರು ಸ್ತ್ರೀಯರನ್ನು ಪ್ರತ್ಯೇಕವಾಗಿ ಗುರುತು ಮಾಡಿಕೊಂಡು ಆರ್ಥಿಕ ಸಾಮಾಜಿಕವಾಗಿಸಶಕ್ತ ಮಾಡಲು ಅನೇಕಯೋಜನೆಗಳನ್ನು ಕಳೆದ 10 ವರ್ಷಗಳಲ್ಲಿ ಜಾರಿಗೊಳಿಸಿದ್ದಾರೆ. ಹೆಣ್ಮಕ್ಕಳಿಗೆ ಅನುಕೂಲವಾಗಲೆಂದು ಮೋದಿ ಜೀ ಅವರು ಜನ್ ಧನ್, ಸ್ವಚ್ಛ ಭಾರತ್ ಮತ್ತಿತರ ‘ನೂರಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ಪರಿಶ್ರಮ ಪಡುತ್ತಿದ್ದಾರೆ.
ರಾಜಕೀಯ ಸಶಕ್ತಿಕರಣಕ್ಕಾಗಿ ನಾರಿ ಶಕ್ತಿ ವಂದನ್ ಕಾಯ್ದೆಯನ್ನು ಜಾರಿಗೊಳಿಸಿ ಶೇ 33 ರಷ್ಟು ಮೀಸಲಾತಿಯನ್ನು ಕಲ್ಪಿಸಿದ್ದಾರೆ. ಕಾಂಗ್ರೆಸ್ಸಿನ ಐ. ಟಿಲ್ ಸುಪ್ರಿಯಾ ಶ್ರೀನಾತೆ ಎಂಬವರು ನಮ್ಮ ಪಕ್ಷದ ಇನ್ನೊಬ್ಬ ಅಭ್ಯರ್ಥಿ ಕಂಗನಾ ರಣಾವತ್ ಕುರಿತು ಅತ್ಯಂತ ಕೀಳುಮಟ್ಟದ ಭಾಷೆಯಲ್ಲಿ ಫೇಸ್ಟುಕ್, ಇನ್ಟ್ಸಾಗ್ರಾಂನಲ್ಲಿ ಪೋಸ್ಟ್ ಹಾಕಿದ್ದರು. ದೇಶಾದ್ಯಂತ ವಿರೋಧ ವ್ಯಕ್ತವಾದಾಗ ಅದನ್ನು ನಾನು ಮಾಡಿಲ್ಲ ಎಂದು ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದರು.
ಈ ಎಲ್ಲ ಘಟನೆಗಳು ಮಹಿಳೆಯರ ಮೇಲಿನ ಕಾಂಗ್ರೆಸ್ನ ಮನಸ್ಥಿತಿಗೆ ಕನ್ನಡಿ ಹಿಡಿದಂತಿದೆ ಎಂದು ರಾಜ್ಯ ಕಾರ್ಯದರ್ಶಿಗಳು ಮತ್ತು ವಿಧಾನ ಪರಿಷತ್ ಶಾಸಕರಾದ ಡಿ ಎಸ್ ಅರುಣ್ ಅವರು ಪತ್ರಿಕಾ ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.