ಶಿವಮೊಗ್ಗ,ಏ. 02:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಚುನಾವಣೆ ಪ್ರಯುಕ್ತ ನಗರದ ಹೊಸಮನೆಯ ಬೂತ್ ಸಂಖ್ಯೆ 83 ರಲ್ಲಿ ಸೋಮವಾರ ಪುರುಷ ಮತ್ತು ಮಹಿಳೆಯರಿಗೆ ಕ್ರೀಡಾಕೂಟ ನಡೆಸುವ ಮೂಲಕ ಮತದಾನ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.
ಕಳೆದ ಚುನಾವಣೆಯಲ್ಲಿ ಕಡಿಮೆ ಪ್ರಮಾಣದ ಮತದಾನವಾಗಿದ್ದ ಹೊಸಮನೆಯಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಮತದಾನ ಮಾಡುವಂತೆ ಅರಿವು ಮೂಡಿಸುವ ಉದ್ದೇಶದಿಂದ ಪುರುಷರು ಮತ್ತು ಮಹಿಳೆಯರಿಗೆ ‘ಬಕೇಟ್ ಇನ್ ದ ಬಾಲ್’ ಆಟ ಆಡಿಸುವ ಮೂಲಕ ಕಡ್ಡಾಯ ಮತದಾನ ಮಾಡುವಂತೆ ಜಾಗೃತಿ ಮೂಡಿಸಲಾಯಿತು.
ಮೇ 07 ರಂದು ನಡೆಯುವ ಮತದಾನ ಪ್ರಕ್ರಿಯೆಯಲ್ಲಿ ತಮ್ಮ ಬೂತ್ಗಳಿಗೆ ಹೋಗಿ ತಪ್ಪದೆ ಮತದಾನ ಮಾಡಬೇಕು ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ. 100 ರಷ್ಟು ಮತದಾನ ಮಾಡಬೇಕು ಎಂದು ಪ್ರತಿಜ್ಞಾ ವಿಧಿ ಬೋಧಿಸಲಾಯಿತು .
ಈ ಸಂದರ್ಭದಲ್ಲಿ ಮಹಾನಗರಪಾಲಿಕೆಯ ಸ್ವೀಪ್ ನೋಡಲ್ ಅಧಿಕಾರಿಗಳಾದ ಅನುಪಮ ಟಿ.ಆರ್, ಸುಪ್ರಿಯಾ, ರತ್ನಾಕರ್, ರೇಣು, ಗೀತಾ, ಅಧಿಕಾರಿ ಸಿಬ್ಬಂದಿಗಳು, ಬಿ.ಎಲ್.ಓ ಮತ್ತು ಮೇಲ್ವಿಚಾರಕರು,ಉಪಸ್ಥಿತರಿದ್ದರು.