ಶಿವಮೊಗ್ಗ : ದೇಶದ ಹಿತದೃಷ್ಟಿಯಿಂದ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ನಗರದ ಅಳ್ಕೊಳ ವೃತ ಸಮೀಪದ ಬಸವ ಮಂಟಪದಲ್ಲಿ ನಡೆದ ಮಹಿಳಾ ಸಮಾವೇಶದಲ್ಲಿ ಅವರು ಮಾತನಾಡಿ,
ರಾಮಮಂದಿರ ನಿರ್ಮಾಣ, ದೇಶದ ಅಭಿವೃದ್ಧಿಗಾಗಿ ದುಡಿಯುತ್ತಿರುವ ಮೋದಿಯವರು ಮತ್ತೆ ಪ್ರದಾನಿಯಾಗಲು ನಾವು ಕೆಲಸ ಮಾಡುತ್ತಿದ್ದೇವೆ. ಕೇಂದ್ರದಲ್ಲಿನ ಬಿಜೆಪಿ ಸರ್ಕಾರದ ಸಾಧನೆಗಳನ್ನು ಮತದಾರರಿಗೆ ತಿಳಿಸಿ ಹೇಳಿದರೆ ಮೂಲಕ ಮತ್ತೊಮ್ಮೆ ಅಧಿಕಾರಕ್ಕೆ ತರುವಲ್ಲಿ ಕಾರ್ಯಕರ್ತರು ಕಾರ್ಯ ಪ್ರವೃತ್ತರಾಗಬೇಕು ಎಂದು ಕರೆ ನೀಡಿದರು.
ಈ ಹಿಂದೆ ಎಲ್.ಪಿ.ಜಿ ಸಿಲಿಂಡರ್ ಸಿಗದ ಪರಿಸ್ಥಿತಿ ಇತ್ತು. ಈಗ ಎಲ್ಲೆಂದರಲ್ಲಿ ಸಿಗುತ್ತಿದೆ. ಬಡ ಕುಟುಂಬಕ್ಕೆ ಉಚಿತವಾಗಿ ಸಿಲಿಂಡರ್ ಪೂರೈಸುತ್ತಿದ್ದೇವೆ. ಹಿಂದಿನ 60 ವರ್ಷಗಳಲ್ಲಿ ಕಾಂಗ್ರೆಸ್ ಸಾದನೆ ಎನು ಎಂದು ಪ್ರಶ್ಣಿಸಿದ ಅವರು, ಪ್ರತಿ ಗ್ರಾಮಗಳಲ್ಲಿ ಉತ್ತಮ ರಸ್ತೆ, ನೀರು, ಶೌಚಾಲಯ, ಮಹಿಳೆಯರ ಸಬಲೀಕರಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಕೋವಿಡ್ ಸಂಧರ್ಭದಲ್ಲಿ ಉಚಿತ ಲಸಿಕೆ ನೀಡಿ ದೇಶದ ಜನರ ಜೀವ ಉಳಿಸಿದ್ದಾರೆ. ಇದೀಗ ವಿಶ್ವವೇ ಭಾರತದ ಕಡೆಗೆ ಬೆರಗು ಕಣ್ಣಿನಿಂದ ನೋಡುವಂತಾಗಿದೆ. ಇದಕ್ಕೆಲ್ಲ ಮೋದಿಯವರ ಶ್ರಮ ಹಾಗೂ ಕೊಡುಗೆ ಅಪಾರವಾದದ್ದು ಎಂದರು.
ಚುನಾವಣೆಗಾಗಿ ಮಾತ್ರ ಮಾತನಾಡುವ ಪಕ್ಷ, ವ್ಯಕ್ತಿ ನಾವಲ್ಲ. ಜನರ ಮದ್ಯೆ ಇದ್ದು ಅಭಿವೃದ್ಧಿ, ದೇಶದ ರಕ್ಷಣೆ, ಜನಪರ ಯೋಜನೆಗಳ ಚಿಂತನೆ ನಡೆಸುವ ಪಕ್ಷ ಬಿಜೆಪಿ ಆಗಿದೆ. ಇದರ ಕಾರ್ಯಕರ್ತರಾಗಿರುವ ನಾವು ಪ್ರಧಾನಿ ನರೇಂದ್ರ ಮೋದಿ ಯವರನ್ನು ಬೆಂಬಲಿಸಬೇಕಿದೆ ಎಂದರು.
ನಮ್ಮ ಪಕ್ಷದ ಹಿರಿಯರೊಬ್ಬರು ಹಿಂದೂ ಧರ್ಮ ಉಳಿಸುತ್ತೇನೆಂದು ಪ್ರಧಾನಿ ಮೋದಿಯವರ ಭಾವಚಿತ್ರ ಬಳಸಿ ಚುನಾವಣೆಗೆ ನಿಂತಿದ್ದಾರೆ. ಇದಕ್ಕೆ ಯಾರು ತಲೆಕೆಡಿಸಿಕೊಳ್ಳುವುದು ಬೇಡ. ಪಕ್ಷದ ಚಿನ್ಹೆ ಕಮಲದ ಗುರುತಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಗಾಯತ್ರಿ ಮಲ್ಲಪ್ಪ, ಶಾಸಕ ಎಸ್ ಎನ್.ಚನ್ನಬಸಪ್ಪ, ವಿಧಾನಪರಿಷತ್ ಸದಸ್ಯೆಚಭಾರತಿ ಶೆಟ್ಟಿ, ಬಿಜೆಪಿ ನಗರಾಧ್ಯಕ್ಷ ಮೋಹನ್ ರೆಡ್ಡಿ, ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ರಶ್ಮಿ ಶ್ರೀನಿವಾಸ್, ಪ್ರದಾನ ಕಾರ್ಯದರ್ಶಿ ಯಶೋಧ ವೈಷ್ಣವ್, ಸುರೇಖ ಮುರಳೀದರ್ ಹಾಗೂ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.