ಶಿವಮೊಗ್ಗ, ಏ.4
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸ್ನೇಹಲ್ ಸುಧಾಕರ ಲೋಖಂಡೆ ಅವರು ಏ.02 ರಂದು ಶಿಕಾರಿಪುರ ತಾಲ್ಲೂಕಿನ ಹಾರೋಗೊಪ್ಪ ಮತ್ತು ತರಲಘಟ್ಟ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಪರಿಶೀಲನೆ ನಡೆಸಿದರು.
ಕುಡಿಯುವ ನೀರು ವಿತರಣೆ ಮಾಡುವಲ್ಲಿ ಯಾವುದೇ ಸಮಸ್ಯೆಗಳು ಬಾರದಂತೆ ಪೂರ್ವನಿಯೋಜಿತವಾಗಿ ಸಿದ್ದತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು ಹಾಗೂ ಸದರಿ ಗ್ರಾಮ ಪಂಚಾಯಿತಿಗಳಲ್ಲಿ
ಮಹಾತ್ಮಾಗಾಂಧಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿರುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ತದನಂತರ ಶಿಕಾರಿಪುರ ತಾಲ್ಲೂಕಿನ ವಿವಿಧ ವಸತಿ ನಿಲಯಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಶಿಕಾರಿಪುರ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾ.ಕು.ನೀರು ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮ ಪಂಚಾಯಿತಿ ಪಿಡಿಒ ಹಾಗೂ ಇತರೆ ಸಿಬ್ಬಂದಿಗಳು ಹಾಜರಿದ್ದರು.