ಶಿವಮೊಗ್ಗ,ಏ.೦೬:
ಕಾಂಗ್ರೆಸ್ ಗ್ಯಾರಂಟಿಗಳು ಲೋಕಸಭಾ ಚುನಾವಣೆಯವರೆಗೆ ಮಾತ್ರ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.
ಅವರು ಇಂದು ನಗರದ ವೀರಶೈವ ಕಲ್ಯಾಣ ಮಂದಿರದಲ್ಲಿ ಬಿಜೆಪಿ ನಗರ ಮಹಿಳಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು,
ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಈಗಾಗಲೇ ಸಾರ್ವಜನಿಕರಿಗೆ ನಿಧಾನವಾಗಿ ಅರಿವಿಗೆ ಬರುತ್ತಿದೆ. ನಮ್ಮದೇ ಜೇಬಿನಿಂದ ಹಣ ತೆಗೆದು ನಮಗೆ ನೀಡುವ ಕಾಂಗ್ರೆಸ್ ತಂತ್ರಗಾರಿಕೆ ಮತದಾರರಿಗೆ ತಿಳಿದಿದೆ. ಕೇಂದ್ರ ಸರ್ಕಾರ ನೀಡುವ ಮೋದಿ ಅಕ್ಕಿಯನ್ನು ಸಿದ್ದರಾಮಯ್ಯನವರ ಭಾಗಚಿತ್ರ ಇರುವ ಚೀಲಕ್ಕೆ ಹಾಕಿ ನಮ್ಮದು ಎಂದು ಕಾಂಗ್ರೆಸ್ ಹೇಳುತ್ತಿದೆ. ಶಕ್ತಿ ಯೋಜನೆ ಎಂದು ಹೇಳಿ, ಉಚಿತ ಬಸ್ ಪ್ರಯಾಣ ಹೆಣ್ಣುಮಕ್ಕಳಿಗೆ
ಎನ್ನುತ ಟಿಕೇಟ್ ದರ ಏರಿಸಿ ಶಾಲಾ ಮಕ್ಕಳು ಮತ್ತು ಕೆಲಸಕ್ಕಾಗಿ ಹೋಗುವ ಪುರುಷ ಪ್ರಯಾಣಿಕರಿಗೆ ಬಸ್ಸೇ ದೊರೆಯದ ಹಾಗೆ ಮಾಡಿದ್ದೆ ಕಾಂಗ್ರೆಸ್ ಸಾಧನೆ. ಈಗಾಗಲೇ ಇದರ ಬಗ್ಗೆ ಅನೇಕ ಪ್ರಯಾಣಿಕರು ದೂರು ನೀಡುತ್ತಿದ್ದಾರೆ. ಬಸ್ಗಳ ಸಂಖ್ಯೆ ಹೆಚ್ಚಳ ಮಾಡದೇ ಈ ರೀತಿಯ ಅವೈಜ್ಞಾನಿಕ ಯೋಜನೆ ಮಾಡಿದ್ದಾರೆ. ಅವೈಜ್ಞಾನಿಕವಾಗಿ ವಾಣಿಜ್ಯ ಮತ್ತು ಇತರ ವಿದ್ಯುತ್ ದರವನ್ನು ಏರಿಸಿ ಉಚಿತ ವಿದ್ಯುತ್ ಎಂದು
ಹೇಳುತ್ತಿದ್ದಾರೆ. ದುಡಿದು ಮನೆಗೆ ಬರುವ ಕೂಲಿಕಾರ್ಮಿಕರಿಗೆ ದಿನ ನಿತ್ಯದ ಅಗತ್ಯ ಮಧ್ಯದ ದರವನ್ನು ದುಪ್ಪಟ್ಟು ಮಾಡಿ ಅವರ ಮನೆಯ ಮಹಿಳೆಗೆ ಗೃಹಲಕ್ಷ್ಮೀ ಯೋಜನೆಯಲ್ಲಿ ೨೦೦೦ ನೀಡಿ, ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುವ ಸ್ಕೀಂನ್ನು ಮಾಡಿದ್ದಾರೆ. ಯುವಕರಿಗೆ ಯುವ ನಿಧಿ ಇನ್ನೂ ಬಂದಿಲ್ಲ, ಕೆಲವರಿಗಷ್ಟೇ ಈ ಸೌಲಭ್ಯ ಸಿಕ್ಕಿದೆ. ಕಾಂಗ್ರೆಸ್ ದೇಶದಲ್ಲಿ ಈಗಾಗಲೇ ನಿರ್ನಾಮವಾಗಿದೆ. ಸಿದ್ದರಾಮಯ್ಯನವರು ಇದೇ ನನ್ನ ಕೊನೆ ಚುನಾವಣೆಯಂದು ಪದೇ ಪದೇ ಒತ್ತಿ ಹೇಳುತ್ತ ಡಿ.ಕೆ.ಶಿವಕುಮಾರ್ಗೆ ಪರೋಕ್ಷವಾಗಿ ಇನ್ನೂ ಉಳಿದ ಅವಧಿಯಲ್ಲಿ ನಾನೇ ಮುಖ್ಯಮಂತ್ರಿ ಎಂದು ಹೇಳುತ್ತಿದ್ದಾರೆ. ಇಡೀ ರಾಜ್ಯದ ಕಾಂಗ್ರೆಸ್ ಶಾಸಕರು, ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ತಮ್ಮ ಕ್ಷೇತ್ರದಲ್ಲಿ ಸರ್ಕಾರದ
ಅನುದಾನ ಲಭ್ಯವಾಗದೇ ಬೇಸತ್ತಿದ್ದು, ಈ ಸರ್ಕಾರ ತೊಲಗಲಿ ಎಂದು ಅವರೇ ಹೇಳುತ್ತಿದ್ದಾರೆ. ರಾಜ್ಯದ ಮತದಾರರು ಮಳೆ ಬೆಳೆ ಇಲ್ಲದೇ ಸಂಕಷ್ಟ ಪಡುತ್ತಿದ್ದು, ಯಡಿಯೂರಪ್ಪ ಇದ್ದಾಗ ಈ ರಾಜ್ಯ ಸುಭೀಕ್ಷವಾಗಿತ್ತು. ಕೋವಿಡ್ ಬಂದಾಗಲೂ ನಮಗೆ ಈ ಸ್ಥಿತಿ ಬಂದಿರಲಿಲ್ಲ. ಆದಷ್ಟು ಬೇಗ ಬಿಜೆಪಿ ಸರ್ಕಾರ ಬರಲಿ ಎಂದು ಆಶಿಸುತ್ತಿದ್ದಾರೆ. ಲೋಕಸಭಾ ಚುನವಣೆಯಲ್ಲಿ ಬಿಜೆಪಿ ಬೆಂಬಲಿಸುವ ನಿರ್ಧಾರವನ್ನು ಮತದಾರ ಈಗಾಗಲೇ ಮಾಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷರಾದ ಕುಮಾರಿ ಮಂಜುಳಾ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಗಾಯಿತ್ರಿಮಲ್ಲಪ್ಪ, ಪ್ರಮುಖರಾದ ರಶ್ಮಿ ಶ್ರೀನಿವಾಸ್, ಯಶೋಧ, ಸುರೇಖಾ ಮುರಳೀಧರ್, ರೇಣುಕಾ ನಾಗರಾಜ್, ಶಾಸಕ ಚನ್ನಬಸಪ್ಪ, ಮೋಹನ್ರೆಡ್ಡಿ, ನಾಗರಾಜ್ ೬ ಮತ್ತು ೭ನೇ ಶಕ್ತಿ ಕೇಂದ್ರದ ಮಹಿಳಾ ಕಾರ್ಯಕರ್ತರು ಹಾಗೂ ಬಿಜೆಪಿ ಜಿಲ್ಲಾ ಪ್ರಮುಖರು ಉಪಸ್ಥಿತರಿದ್ದರು.