ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಶಿವಮೊಗ್ಗ ನಗರದ ಶ್ರೀ ಆದಿಚುಂಚನಗಿರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿಗೆ ಶೇ.99.78% ಫಲಿತಾಂಶ ಬಂದಿರುತ್ತದೆ.
ಪರೀಕ್ಷೆಗೆ ಕುಳಿತ462 ವಿದ್ಯಾರ್ಥಿಗಳಲ್ಲಿ 293 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 164 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ 04 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ
ತೇರ್ಗಡೆಯಾಗಿರುತ್ತಾರೆ.
ಚಿ. ಶರತ್ ವಿ. ಕೆ. 600 ಅಂಕಗಳಿಗೆ 590 ಅಂಕಗಳನ್ನು ಪಡೆದು ರಾಜ್ಯಕ್ಕೆ 9ನೇ ರ್ಯಾಂಕ್, ಕು. ಸೃಷ್ಟಿ ಟಿ. 600 ಅಂಕಗಳಿಗೆ 589 ಅಂಕಗಳನ್ನು ಪಡೆದು ರಾಜ್ಯಕ್ಕೆ 10ನೇ ರ್ಯಾಂಕ್ ಪಡೆದಿರುತ್ತಾರೆ ಹಾಗೂ ಚಿ. ಕೇಶವ ಜಿ. 600 ಅಂಕಗಳಿಗೆ 588 ಅಂಕಗಳನ್ನು ಗಳಿಸಿರುತ್ತಾರೆ.
ಅಲ್ಲದೇ 47 ಜನ ವಿದ್ಯಾರ್ಥಿಗಳು ವಿಷಯವಾರು 100ಕ್ಕೆ 100 ಅಂಕಗಳನ್ನು ಪಡೆದುಕೊಂಡು ಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾರೆ.
ಈ ಎಲ್ಲಾ ವಿದ್ಯಾರ್ಥಿಗಳಿಗೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು, ಆಡಳಿತ ಮಂಡಳಿಯ ನಿರ್ದೇಶಕರು, ಕಾಲೇಜಿನ ಪ್ರಾಚಾರ್ಯ ಗುರುರಾಜ್ ಹಾಗೂ ಉಪನ್ಯಾಸಕರು, ಎಲ್ಲಾ ಸಿಬ್ಬಂದಿ ವರ್ಗದವರು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.