ಬೆಂಗಳೂರು,ಜ.06:
ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಹಾಗೂ ಜೂನ್ ಮೊದಲ ವಾರದಲ್ಲಿ ಎಸ್‌ಎಸ್‌ಎಲ್ಸಿ ಪರೀಕ್ಷೆ ಪ್ರಾರಂಭವಾಗಲಿದೆ.
ಸಚಿವ ಎಸ್ ಸುರೇಶ್ ಕುಮಾರ್ ಈ ಕುರಿತಾಗಿ ಮಾಹಿತಿ ನೀಡಿದ್ದು, ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಪರೀಕ್ಷೆಗಳು ನಡೆಯಲಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಜೂನ್ ಮೊದಲ ವಾರದಿಂದ ಪ್ರಾರಂಭವಾಗಲಿವೆ ಎಂದು ಹೇಳಿದ್ದಾರೆ.
ಶಿಕ್ಷಣ ಇಲಾಖೆಯು ಈ ತರಗತಿಗಳಿಗೆ ಸಂಬಂಧಿಸಿದಂತೆ ಪರೀಕ್ಷಾ ದೃಷ್ಟಿಯಿಂದ ಬೋಧನೆ, ಕಲಿಕೆಗಾಗಿ ಗುರ್ತಿಸಿರುವ ವಿಷಯಾಂಶಗಳನ್ನು ಅಂತಿಮಗೊಳಿಸಿದ್ದು, ಇದರ ವಿವರಗಳನ್ನು ಎಲ್ಲ ಶಾಲೆಗಳಿಗೆ ತಲುಪಿಸಲಾಗುತ್ತದೆ. ಯಾವುದೇ ವಿದ್ಯಾರ್ಥಿಗೂ ಹೊರೆಯಾಗದ ರೀತಿಯಲ್ಲಿ ಕನಿಷ್ಟ ಕಲಿಕೆಗೆ ಬೋಧಿಸಬೇಕಿರುವ ಪಠ್ಯಗಳನ್ನು ಪರಿಗಣಿಸಲಾಗಿದೆ ಎಂದು ಅವರು ಹೇಳಿದ್ದಾರೆ.

By admin

ನಿಮ್ಮದೊಂದು ಉತ್ತರ

You missed

error: Content is protected !!