ಶಿವಮೊಗ್ಗ,ಏ.18:
ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ರವರು ಈ ಬಾರಿ ಬಹುಮತದಿಂದ ಜಯಗಳಿಸುವುದು ಖಚಿತ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಹೆಚ್ ಎಲ್ ಷಡಾಕ್ಷರಿ (ಅರಕೆರೆ) ತಿಳಿಸಿದರು.
ಅವರು ಇಂದು ಬೆಳಿಗ್ಗೆ ಸುದ್ದಿಗೋಷ್ಠಿಯ ಸಮಯದಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಾ ಶಿವಮೊಗ್ಗ ಗ್ರಾಮಾಂತರ ಭಾಗದಲ್ಲಿ ಅತಿ ಹೆಚ್ಚಿನ ಬೆಂಬಲ ವ್ಯಕ್ತವಾಗಿದ್ದು, ಸಾಗರ, ಸೊರಬ ತೀರ್ಥಹಳ್ಳಿ, ಭದ್ರಾವತಿ ಭಾಗದಲ್ಲೂ ಸಹ ಕಾಂಗ್ರೆಸ್ ಅಭ್ಯರ್ಥಿಗೆ ಅಪಾರ ಬೆಂಬಲ ವ್ಯಕ್ತವಾಗಿದೆ ಎಂದು ತಿಳಿಸಿದರು.
ಚುನಾವಣಾ ಸಭೆ ಸಮಾರಂಭಗಳು ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದು, ಮತದಾರರು ಅತಿ ಹೆಚ್ಚು ಪ್ರೀತಿಯನ್ನು ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ತೋರುತ್ತಿದ್ದು, ಕಾಂಗ್ರೆಸ್ ಪಕ್ಷ ನಿಚ್ಚಳ ಬಹುಮತ ಗೆಲುವು ಸಾಧಿಸುವುದು ಖಚಿತ ಎಂದು ಹೇಳಿದರು.