ಶಿವಮೊಗ್ಗ: ನಟ ದರ್ಶನ್ ಪ್ರಚಾರಕ್ಕೆ ಹೋಗುವುದರಲ್ಲಿ ತಪ್ಪೇನಿಲ್ಲ. ಪ್ರಜಾಪ್ರಭುತ್ವದಲ್ಲಿ ಯಾರು ಯಾರ ಪರ ಬೇಕಾದರೂ ಪ್ರಚಾರ ಮಾಡಬಹುದು ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ದರ್ಶನ್ ಪ್ರಚಾರ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿ, ದರ್ಶನ್ ಪ್ರಚಾರಕ್ಕೆ ಹೋಗುವುದರಲ್ಲಿ ತಪ್ಪೇನಿಲ್ಲ. ಅವರ ಕರ್ತವ್ಯ ಅವರು ಮಾಡುತ್ತಿದ್ದಾರೆ. ಅದಕ್ಕೆ ಪ್ರತಿಕ್ರಿಯೆ ನೀಡುವಂಥದ್ದು ಏನೂ ಇಲ್ಲ ಎಂದರು.
ಜೆಡಿಎಸ್, ಬಿಜೆಪಿ ಒಗ್ಗಟ್ಟಾಗಿ ಹೊಂದಾಣಿಕೆಯಿಂದ ಕೆಲಸ ಮಾಡುತ್ತಿದ್ದೇವೆ. ಶಿವಮೊಗ್ಗ ಕ್ಷೇತ್ರದಲ್ಲಿ ಉತ್ತಮವಾಗಿ ಹೊಂದಾಣಿಕೆ ನಡೆದಿದೆ. ಬಿಜೆಪಿ ಅಭ್ಯರ್ಥಿ ಹೆಚ್ಚಿನ ಅಂತರದಿಂದ ಗೆಲುವು ಸಾಧಿಸಬೇಕು ಎಂದರು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಚಾರದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಹೇಳಿಕೆ ಬಗ್ಗೆ ಮಾತನಾಡಿದ ಕುಮಾರಸ್ವಾಮಿ, ದೇವೇಗೌಡರು ಹೇಳಿದ್ದು 30- 35 ವರ್ಷದ ಕಥೆ. ಅದಕ್ಕೆ ದಾಖಲೆ ಇದೆ ಎಂದು ದೇವೇಗೌಡ್ರು ಹೇಳಿದ್ದಾರೆ ಎಂದರು.
ರಾಜ್ಯದಲ್ಲಿ ಎಲ್ಲಾ 28 ಕ್ಷೇತ್ರಗಳಲ್ಲಿ ಮೈತ್ರಿಕೂಟ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಬಿಜೆಪಿಯಲ್ಲಿ ಭಿನ್ನಮತದ ವಿಚಾರ. ಬಿಜೆಪಿ ಹೈಕಮಾಂಡ್ ಇದು ಬಗೆಹರಿಸುತ್ತಿದೆ. ಡಿ.ಕೆ. ಶಿವಕುಮಾರ್ ಅಕ್ರಮ ಆಸ್ತಿ ವಿಚಾರದ ಬಗ್ಗೆ ಅದೆಲ್ಲಾ ನಿಧಾನವಾಗಿ ಮಾತಾನಾಡೋಣ ಬನ್ನಿ. ವಿಚಾರದ ಬಗ್ಗೆ ಆಮೇಲೆ ಚರ್ಚೆ ಮಾಡೋಣ. ರಾಹುಲ್ ಗಾಂಧಿ ಪಾಪ ಪ್ರಚಾರ ಮಾಡಿದ್ದಾರೆ. ಅಧ್ಯಕ್ಷರು ಯಾರು, ಮುಖ್ಯಮಂತ್ರಿ ಯಾರು ಎಂಬುದು ಅವರಿಗೆ ಗೊತ್ತಿಲ್ಲ. ಇನ್ಯಾವ ರೀತಿ ಪ್ರಚಾರ ಮಾಡಿದ್ದಾರೆಂದು ನೀವು ತಿಳಿದುಕೊಳ್ಳಿ ಎಂದರು.