Davanagere Crime

ಶಿವಮೊಗ್ಗ,ಏ.19: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸದಸ್ಯ ನಿರಂಜನ ಹಿರೇಮಠ್‍ರವರ ಪುತ್ರಿ ನೇಹಾಳನ್ನು ಹುಬ್ಬಳಿಯ ಬಿ.ವಿ.ಬಿ. ಕಾಲೇಜಿನಲ್ಲಿ ದುಷ್ಕರ್ಮಿಯೊಬ್ಬ ಚಾಕುವಿನಿಂದ ಹಿರಿದು ಹಾಡಹಗಲೇ ಕೊಲೆ ಮಾಡಿರುವುದನ್ನು ಶಿವಮೊಗ್ಗ ಜಿಲ್ಲಾ ಬೇಡ ಜಂಗಮ ಮಹಿಳಾ ಘಟಕ ಖಂಡಿಸಿದೆ.

ಹುಬ್ಬಳ್ಳಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ ಅಲ್ಲದೆ ಪ್ರತಿಯೊಬ್ಬ ಪೋಷಕರು ಹಾಗೂ ಮಹಿಳೆಯರಲ್ಲಿ ಅಸುರಕ್ಷತೆಯ ವಾತಾವರಣ ಮನೆ ಮಾಡಿದೆ ಎಂದು ಆತಂಕ ವ್ಯಕ್ತ ಪಡಿಸಿದೆ. 

ಈ ಕೃತ್ಯವನ್ನು ಖಂಡಿಸಿರುವ ಮಹಿಳಾ ಘಟಕದ ಅಧ್ಯಕ್ಷೆ ಸುನಂದ ಎಂ.ವಿ. ಮತ್ತು  ಮಹಿಳಾ ಸಮಾಜದ ಕಾರ್ಯದರ್ಶಿ ಜ್ಯೋತಿ ನಾಗರಾಜಯ್ಯ, ಸಂಘಟನಾ ಕಾರ್ಯದರ್ಶಿ ಪ್ರೇಮಾ ವೀರಪ್ಪಯ್ಯ, ರಶ್ಮಿ, ಆರತಿ, ಲಲಿತಾ, ಸುಜಯ, ಸುಜಾತಾ ಅವರು

ಇದಕ್ಕೆ ತಕ್ಕ ಸೂಕ್ತ ಕ್ರಮ ಸರ್ಕಾರ ಕೈಗೊಳ್ಳಬೇಕು. ಮತ್ತು ವಿದ್ಯಾರ್ಥಿಯ ಸಾವಿಗೆ ನ್ಯಾಯ ದೊರಕಿಸಿಕೊಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಮಹಿಳೆಯರೆಲ್ಲರೂ ಸೇರಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ. 

By admin

ನಿಮ್ಮದೊಂದು ಉತ್ತರ

You missed

error: Content is protected !!