Chief Minister H D Kumaraswamy interview in Bengaluru on Monday 27th August 2018. Photo by Janardhan BK
ಶಿವಮೊಗ್ಗ: ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ನಿಂದ ಉಚ್ಚಾಟನೆ ಮಾಡಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರು ತೀರ್ಮಾನಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ಅವರ ಉಚ್ಚಾಟನೆಯ ಬಗ್ಗೆ ಭಾನುವಾರ ರಾತ್ರಿಯೇ ದೇವೇಗೌಡರ ಜೊತೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳಲಾಗಿತ್ತು. ಹುಬ್ಬಳ್ಳಿಯಲ್ಲಿ ಮಂಗಳವಾರ ನಡೆಯುವ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಆ ಬಗ್ಗೆ ಅಧಿಕೃತ ಅದೇಶ ಹೊರಡಿಸಲಾಗುವುದು ಎಂದು ತಿಳಿಸಿದರು.

ಈ ವಿಚಾರದಲ್ಲಿ ಎಐಸಿಸಿ ನಾಯಕಿ ಪ್ರಿಯಾಂಕಾ ಗಾಂಧಿ ಟ್ವೀಟ್ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ನರೇಂದ್ರ ಮೋದಿ, ಬಿಜೆಪಿ, ದೇವೇಗೌಡರಿಗೂ ಈ ಪ್ರಕರಣಕ್ಕೂ ಸಂಬಂಧ ಇಲ್ಲ. ಈ ವಿಚಾರದಲ್ಲಿ ನನ್ನ ಹಾಗೂ ನನ್ನ ತಂದೆಯ ಬಗ್ಗೆ ಯಾರೂ ಸಂಶಯಪಡಬೇಡಿ ಎಂದು ಮನವಿ ಮಾಡಿದರು.

ರಾಜ್ಯದ ಹೆಣ್ಣು ಮಕ್ಕಳ ಧ್ವನಿಯಾಗಿ ನಾನೂ ಧ್ವನಿ ಎತ್ತುತ್ತೇನೆ. ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಯಾವುದೇ ರಾಜಿ ಇಲ್ಲ. ತಪ್ಪು ಆಗಿದ್ದರೆ ಈ ನೆಲದ ಕಾನೂನಿನ ಪ್ರಕಾರ ಶಿಕ್ಷೆ ಆಗಬೇಕು ಎಂಬ ನನ್ನ ನಿಲುವು ಮುಂದುವರೆಯಲಿದೆ ಎಂದು ಹೇಳಿದರು.
