ಶಿವಮೊಗ್ಗ: ಪ್ರತಿ ಬೂತ್ ನಲ್ಲೂ ಹೆಚ್ಚಿನ ಮತಗಳನ್ನು ಪಡೆಯುವ ವಿಶ್ವಾಸವಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ತಿಳಿಸಿದರು.
ಆನಂದಪುರ ಯಡೆಹಳ್ಳಿಯ ಕೃಷ್ಣ ಸರಸ್ ಕನ್ವೆನ್ಷನ್ ಹಾಲ್ ನಲ್ಲಿ ನಡೆದ ರಾಷ್ಟ್ರ ಭಕ್ತರ ಬಳಗದ ಕಾರ್ಯಕರ್ತರೊಂದಿಗೆ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಪ್ರಧಾನಿಯಾಗಬೇಕು, ಭಾರತೀಯ ಜನತಾ ಪಕ್ಷ ಶುದ್ದೀಕರಣವಾಗಬೇಕು ಎನ್ನುವ ಸಂಕಲ್ಪ ಇರಿಸಿಕೊಂಡು ಹೋರಾಟ ಮಾಡುತ್ತಿರುವ ನನಗೆ ಪ್ರತಿ ಬೂತ್ ನಿಂದ ಹೆಚ್ಚಿನ ಜನರ ಬೆಂಬಲ ದೊರೆಯುತ್ತಿದೆ ಎಂದರು.
ರಾಷ್ಟ್ರಭಕ್ತರ ಬಳಗದ ಕಾರ್ಯಕರ್ತರು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ನನ್ನ ಗುರುತಾದ ರೈತನ ಗುರುತಿಗೆ ಮತ ಹಾಕಿಸುವುದರ ಮೂಲಕ ನನ್ನನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿಕೊಂಡರು.
ನಿಮ್ಮೆಲ್ಲರ ಮತ ಪರಿವರ್ತನೆ ಕೆಲಸದಿಂದ ನಾನು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾಗಿ ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ತಿಳಿಸಿದರು.
ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದಲ್ಲಿ ನೊಂದ ಹಲವು ಕಾರ್ಯಕರ್ತರು ರಾಷ್ಟ್ರಭಕ್ತರ ಬಳಗಕ್ಕೆ ಸೇರ್ಪಡೆಗೊಂಡರು.
ಕಾರ್ಯಕ್ರಮದಲ್ಲಿ ವೆಂಕಟೇಶ್ ಚಂದಳ್ಳಿ.ರಾಕೇಶ್. ಗೋಪಾಲ್ ಬೈರಾಪುರ. ದೇವರಾಜ್. ನಾರಾಯಣ. ಬಸವರಾಜು. ಅನಿಲ್ ಕುಮಾರ್. ರಾಜು. ಇನ್ನಿತರರಿದ್ದರು.