ಶಿವಮೊಗ್ಗ :
ಶಿವಮೊಗ್ಗ ನಗರದ ಹೊರವಲಯದಲ್ಲಿರುವ ತುಂಗಾ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯ ತ್ಯಾವರೆಕೊಪ್ಪದಲ್ಲಿ ಮಹಿಳೆಯ ಮೇಲೆ ಹಲ್ಲೆ ಮಾಡಿ ಅವ್ಯಾಚ ಶಬ್ದಗಳಿಂದ ನಿಂದಿಸಿರುವ ಘಟನೆ ವರದಿಯಾಗಿದೆ.
ತ್ಯಾವರೆಕೊಪ್ಪದ ದಿನೇಶ್ ಎಂಬಾತ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮಹಿಳೆ ಹಾಗೂ ಮಹಿಳೆಯ ಪುತ್ರಿಯ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಅವರನ್ನು ಠಾಣೆಗೆ ಕರೆಸಿ ಸೂಕ್ತ ಬಂದೋಬಸ್ತ್ ಮಾಡಿಕೊಡಲು ತುಂಗಾ ನಗರ ಠಾಣೆಗೆ ದೂರು ನೀಡಿದ್ದಾರೆ.
ಹಲ್ಲೆಗೆ ಒಳಗಾಗಿರುವ ಮಹಿಳೆಗೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ನ್ಯಾಯ ಸಿಗುವುದೇ ಎಂಬುದು ಕಾದು ನೋಡಬೇಕಾಗಿದೆ.