ಶಿವಮೊಗ್ಗ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾಜೀ ಅವರು ಬಂದು ಹೋದ ಬಳಿಕ ಉತ್ತಮ ವಾತಾವರಣ ನಿರ್ಮಾಣವಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಮತಯಾಚನೆ ಮಾಡಲಿದ್ದೇವೆ. ಹೊಸಮನೆ, ಪಿಎನ್ ಟಿ ಕಾಲೋನಿ, ವಿನೋಬನಗರ, ಬಾಪೂಜಿನಗರ, ಹೊಳಲೂರು ಮತ್ತು ಆನವಟ್ಟಿಯಲ್ಲಿ ಮತಯಾಚನೆ ನಡೆಸುತ್ತಿದ್ದೇವೆ ಎಂದರು.
ಪ್ರಚಾರಕ್ಕೆ ಹೋದ ಕಡೆಗೆಲ್ಲ ಜನರಿಂದ ಬಿಜೆಪಿಗೆ ಒಳ್ಳೆಯ ಬೆಂಬಲ ವ್ಯಕ್ತವಾಗುತ್ತಿದೆ. ಜನರು ಮೋದಿ ಸರ್ಕಾರದ ಜನಪರ ಆಡಳಿತವನ್ನು ಮೆಚ್ಚಿಕೊಂಡಿದ್ದಾರೆ. ಈ ಬಾರಿಯೂ ಬಿಜೆಪಿಗೆ ಬೆಂಬಲ ನೀಡಲಿದ್ದಾರೆ ಎಂದರು.