ಶಿವಮೊಗ್ಗ: ರಾಜ್ಯದ 28 ಲೋಕಸಭಾ ಕ್ಷೇತ್ರದಲ್ಲಿ ಎಲ್ಲಾ 28 ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಸದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಎರಡೂವರೆ ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ.
ಜೆಡಿಎಸ್ ಪಕ್ಷದ ಜೊತೆಗಿನ ಹೊಂದಾಣಿಕೆ ಪ್ರಧಾನಿ ಮೋದಿ ಅವರ ಪ್ರಭಾವ ಬಿಜೆಪಿ ಗೆಲುವಿಗೆ ಅನುಕೂಲವಾಗುತ್ತದೆ ಎಂದರು.
ನಾಳೆಯಿಂದ ಮತ್ತೆ ನನ್ನ ಪ್ರವಾಸ ಆರಂಭವಾಗಲಿದೆ. ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣವಿದೆ. ಅಮಿತ್ ಶಾ, ನಡ್ಡಾ, ಹೆಚ್.ಡಿ. ಕುಮಾರಸ್ವಾಮಿ ಮತ್ತು ಹೆಚ್.ಡಿ. ದೇವೇಗೌಡರು ಪ್ರಚಾರ ನಡೆಸುತ್ತಿದ್ದಾರೆ.
ಇವೆಲ್ಲದರ ಪರಿಣಾಮ 28ಕ್ಕೆ 28 ಕ್ಷೇತ್ರಗಳಲ್ಲಿ ಗೆಲ್ಲುವ ನಮ್ಮ ಸಂಕಲ್ಪದಲ್ಲಿ ಯಶಸ್ವಿ ಆಗುತ್ತೇವೆ ಎಂದರು.