ಶಿವಮೊಗ್ಗ : ಮೇ 04 : : 2024-25ನೇ ಸಾಲಿಗೆ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ 3 ವರ್ಷಗಳ ಡಿಪ್ಲೊಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ಕಲಿಕೆಗಾಗಿ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.


ಗದಗ-ಬೆಟಗೇರಿ-22 ಅಭ್ಯರ್ಥಿಗಳು, ತಮಿಳುನಾಡಿನ ಸೇಲಂ-17 ಅಭ್ಯರ್ಥಿಗಳು, ಆಂದ್ರಪ್ರದೇಶದ ನಲ್ಲೂರು ಜಿಲ್ಲೆಯ ಎಸ್.ಪಿ.ಕೆ.ಎಂ.-03 ಅಭ್ಯರ್ಥಿಗಳು, ಹಾಗೂ ಕೇರಳದ ಕಣ್ಣೂರು -02 ಅಭ್ಯರ್ಥಿಗಳಿಗೆ ಅವಕಾಶವಿದ್ದು,  ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೊಮಾ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸಿಲಿಂಗ್‍ಗಾಗಿ ಕರೆಯಲಾಗುವುದು.  ಆಯ್ಕೆಯಾದ ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ರೂ. 2,500/- ರಂತೆ ಶಿಷ್ಯವೇತನ ಹಾಗೂ ಪುರುಷ ಅಭ್ಯರ್ಥಿಗಳಿಗೆ ವಸತಿನಿಲಯದ ವ್ಯವಸ್ಥೆಯನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು.


ಆಸಕ್ತರು ನಿಗಧಿತ ನಮೂನೆ ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ  ಸಂಸ್ಥೆ, ನರಸಾಪುರ, ಗದಗ-ಬೆಟಗೇರಿ-08372-297221, ಮೊ.ಸಂ.: 9449162822 ಅಥವಾ ಆಯಾ ಜಿಲ್ಲೆಯ ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಶಿವಮೊಗ್ಗ -08182-223405 ನ್ನು ಸಂಪರ್ಕಿಸುವುದು.

ಆನ್‍ಲೈನ್ https://khtigadag.ac.in/AdmissionForm.pdf  ರಿಂದ ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದೆ.
ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ದಿ: 31/05/2024 ರೊಳಗಾಗಿ ಪ್ರಾಂಶುಪಾಲರು, ಕ.ಕೈ.ತಂ.ಸಂ. ನರಸಾಪುರ, ಗದಗ-ಬೆಟಗೆರಿ-582102 ಇವರಿಗೆ ಸಲ್ಲಿಸುವಂತೆ ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕ ಶಿವಲಿಂಗಪ್ಪ ಎನ್. ಕುಂಬಾರ  ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

By admin

ನಿಮ್ಮದೊಂದು ಉತ್ತರ

You missed

error: Content is protected !!