ಶಿವಮೊಗ್ಗ,ಮೇ೯:
ಇಡೀ ರಾಜ್ಯದಲ್ಲಿಯೇ ಶಿವಮೊಗ್ಗ ಜಿಲ್ಲೆ ೩ನೇ ಸ್ಥಾನಗಳಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಡಿಡಿಪಿಐ ಪರಮೇಶ್ವರಪ್ಪ ಸಿ.ಆರ್. ಅವರು ಫಲಿತಾಂಶ ಹೆಚ್ಚಳಕ್ಕಾಗಿ ಅನೇಕ ಕ್ರಮ ಕೈಗೊಳ್ಳಲಾಗಿತ್ತು. ಮೊದಲಿಗೆ ಸಾರ್ವಜ ನಿಕ ಶಿಕ್ಷಣ ಇಲಾಖೆ ಮತ್ತು ಡಯಟ್ ಸಹಯೋಗದಲ್ಲಿ ಶೇ.೭೦ಕ್ಕಿಂತ ಕಡಿಮೆ ಫಲಿತಾಂಶ ಪಡೆದಿದ್ದ ಶಾಲೆಗಳನ್ನು ಗುರುತಿಸಲಾಯಿತು. ವಿದ್ಯಾರ್ಥಿಗಳನ್ನು ೩ ಭಾಗಗಳಾಗಿ ವಿಂಗಡಿಸಿ ಅವರ ಕಲಿಕೆಗೆ ಹೆಚ್ಚಿನ ಒತ್ತು ನೀಡಲಾಯಿತು ಎಂದರು.
೮ ಶಿಕ್ಷಕರ ತಂಡಗಳು ಪ್ರತಿ ವಿದ್ಯಾರ್ಥಿಯ ಸಮೀಕ್ಷೆ ನಡೆಸಿ ಅವರು ಯಾವ ವಿಷಯದಲ್ಲಿ ಹಿಂದುಳಿದಿದ್ದಾರೆ ಎಂಬುವುದನ್ನು ಪರಿಶೀಲಿಸಿದರು. ನಂತರ ಅವರಿಗೆ ಅಗತ್ಯವಾದ ಮಾರ್ಗದರ್ಶನ ನೀಡಲಾಯಿತು ಎಂದು ತಿಳಿಸಿದರು.
ಸುಮಾರು ೯೯ ಶಾಲೆಗಳು ಶೇ.೭೦ಕ್ಕಿಂತ ಕಡಿಮೆ ಫಲಿತಾಂಶ ಪಡೆದಿದ್ದವು, ಅಂತಹ ಶಾಲೆಗಳಲ್ಲಿ ಕೈಗೊಂಡ ಸುಧಾರಣೆ ಕ್ರಮಗಳಿಂದಾಗಿ ಈ ಬಾರಿ ಹೆಚ್ಚಿನ ಫಲಿತಾಂಶ ಬಂದಿದೆ. ಫಲಿತಾಂಶ ಹೆಚ್ಚಳಕ್ಕಾಗಿ ರಚಿಸಲಾಗಿದ್ದ ಅಧಿಕಾರಿಗಳು, ಶಿಕ್ಷಕರ ತಂಡ ಮಕ್ಕಳ ಕಲಿಕೆಗೆ ಒತ್ತು ನೀಡುವುದರ ಜೊತೆಗೆ ಜನವರಿಯಿಂ ದಲೇ ಪುನರಾವರ್ತನೆ ಆರಂಭಿಸಿದರು. ಶಾಲಾ ಹಂತ, ತಾಲ್ಲೂಕು ಹಂತ ಜಿಲಾ ಮತ್ತು ರಾಜ್ಯ ಮಟ್ಟದಲ್ಲಿಯೂ ಪೂರ್ವಬಾವಿ ಪರೀಕ್ಷೆ ಮಾಡಲಾಯಿತು.
ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ಅವರು ಉತ್ತೀರ್ಣರಾಗಲು ಅವಶ್ಯಕ ವಾದ ಕಲಿಕೆಯ ಮಾರ್ಗಗಳನ್ನು ನೀಡಲಾಯಿತು. ಪಾಸಿಂಗ್ ಪ್ಯಾಕೇಜ್ ರೂಪಿಸಿ ಪ್ರಶ್ನೆ ಪತ್ರಿಕೆಗಳನ್ನು ರಚಿಸಿ ನೀಡಲಾಯಿತು. ಇದು ಕೂಡ ಫಲಿ ತಾಂಶ ಹೆಚ್ಚಳಕ್ಕೆ ಕಾರಣವಾಯಿತು. ಬಹಳ ಮುಖ್ಯವಾಗಿ ಶಿಕ್ಷಣ
ಇಲಾಖೆ ಕಟ್ಟುನಿಟ್ಟಿನಿಂದ ಪರೀಕ್ಷೆ ಸಿಸಿಕ್ಯಾಮೆರಾ, ವೆಬ್ ಕ್ಯಾಮ್ ಮೂಲಕವು ಪರೀಕ್ಷೆ ಯಲ್ಲಿ ಯಾವುದೇ ಅಕ್ರಮಕ್ಕೆ ಅವಕಾಶ ವಿಲ್ಲದಂತೆ ನಿಗಾ ವಹಿಸಲಾಗಿತ್ತು. ೭೮ ಪರೀಕ್ಷಾ ಕೇಂದ್ರ ಗಳಲ್ಲಿ ವೆಬ್ಕ್ಯಾಮರಾ ಅಳವಡಿಸಿ ೧೧ ಲ್ಯಾಪ್ ಟಾಪ್ಗಳ ಮೂಲಕ ವೀಕ್ಷಿಸಲಾಯಿತು ಎಂದು ತಿಳಿಸಿದರು.
ಶಿಕ್ಷಣ ಇಲಾಖೆ ಅಧಿಕಾರಿ ಲೋಕೇಶ್ವರಪ್ಪ ಮಾತನಾಡಿ, ಕಡಿಮೆ ಫಲಿತಾಂಶ ಪಡೆದ ಶಾಲೆಗಳನ್ನು ಮೊದಲೇ ಗುರುತಿಸಿ ಅಲ್ಲಿನ ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡಲಾಯಿತು. ಒಂದು ರ್ಷದಿಂದ ನಿರಂತರವಾಗಿ ಪಾಠ ಕಲಿಕೆ ಪರೀಕ್ಷೆ ಪುನರ್ಮನನ ಸೇರಿ ಹಲವು ಕ್ರಮಗಳನ್ನು ಕೈಗೊಂಡಿದ್ದರಿಂದ ಫಲಿತಾಂಶ ಬಹುತೇಕ ಸುಧಾರಿಸಿದ್ದು, ಈ ಬಾರಿ ಸರ್ಕರಿ ಶಾಲೆಗಳಲ್ಲೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಶೇ.೧೦೦ರಷ್ಟು ಫಲಿತಾಂಶ ಪಡೆದಿರುವುದು ವಿಶೇಷವಾಗಿದೆ ಎಂದು ಹೇಳಿದರು.