ಶಿವಮೊಗ್ಗ, ಮೇ -09 ):  ಸಮಾಜ ಕಲ್ಯಾಣ ಇಲಾಖೆಯು 2023-24 ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದವರಿಗೆ ಹಾಗೂ ಅರಣ್ಯ ಆಧಾರಿತ ಆದಿವಾಸಿ ಸಮುದಾಯದ

ವಿದ್ಯಾವಂತ ನಿರುದ್ಯೋಗಿ 18-45 ವರ್ಷ ವಯೋಮಿತಿಯ ಯುವಕ/ಯುವತಿಯರಿಗೆ ಜಿಲ್ಲಾ ಮಟ್ಟದಲ್ಲಿ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ- ಬೆಂಗಳೂರು ಇವರ ಪ್ರಾದೇಶಿಕ ತರಬೇತಿ ಕೇಂದ್ರಗಳ ಸಹಯೋಗದೊಂದಿಗೆ

60 ದಿನಗಳ ವಿವಿಧ ಕೌಶಲ್ಯಾಭಿವೃದ್ಧಿ (ತಾಂತ್ರಿಕ ನೈಪುಣ್ಯತೆ) ತರಬೇತಿಯನ್ನು ಆಯೋಜಿಸಲಾಗಿದ್ದು,  ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ,

ಶಿವಮೊಗ್ಗ ಅಥವಾ ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಮೂಲಕ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


ಹೆಚ್ಚಿನ ಮಾಹಿತಿಗಾಗಿ ಇಲಾಖಾ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-249241 ನ್ನು ಸಂಪರ್ಕಿಸುವುದು.

By admin

ನಿಮ್ಮದೊಂದು ಉತ್ತರ

error: Content is protected !!