ಸುದ್ದಿ ವಿಶ್ಲೆಷಣೆ
ಪ್ರಧಾನಿ ನರೇಂದ್ರ ಮೋದಿ ಅವರು 75 ವರ್ಷ ತುಂಬಿದ ನಂತರ ನಿವೃತ್ತಿಯಾಗುವುದಿಲ್ಲ. ಅವರೇ ಮತ್ತೆ ಪ್ರಧಾನಿಯಾಗಿ ದೇಶ ಮುನ್ನಡೆಸಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಜೈಲಿನಿಂದ ಬಿಡುಗಡೆಯಾದ ಒಂದು ದಿನದ ನಂತರ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು,
ಈ ವೇಳೆ, ಇದೇ ವರ್ಷ ಸೆಪ್ಟೆಂಬರ್ ನಲ್ಲಿ ಪ್ರಧಾನಿ ಮೋದಿ ಅವರು 75ನೇ ವರ್ಷಕ್ಕೆ ಕಾಲಿಡುತ್ತಿದ್ದು, ಅವರ ಪಕ್ಷದ ನಿಯಮದ ಪ್ರಕಾರ 75 ವರ್ಷ ತುಂಬಿದವರು ನಿವೃತ್ತಿಯಾಗಬೇಕು ಅವರೇ 2014 ರಲ್ಲಿ ನಿಯಮ ಮಾಡಿದರು. ಹೀಗಾಗಿ ಮೋದಿ ಪ್ರಧಾನಿಯಾಗಿ ಮುಂದುವರೆಯಲು ಸಾಧ್ಯವಿಲ್ಲ. ಮೋದಿ ಬದಲು ಅಮಿತ್ ಶಾ ಪ್ರಧಾನಿಯಾಗುತ್ತಾರೆ. ಅಮಿತ್ ಶಾ ಪರವಾಗಿ ಮೋದಿ ಮತಯಾಚಿಸುತ್ತಿದ್ದಾರೆ ಎಂದು ಹೇಳಿದ್ದರು.
ದೆಹಲಿ ಸಿಎಂ ಕೇಜ್ರಿವಾಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅಮಿತ್ ಶಾ, ಅಂತಹ ಯಾವುದೇ (75 ವರ್ಷಗಳ ಮಿತಿ ನಿಯಮ) ಬಿಜೆಪಿಯ ಸಂವಿಧಾನದಲ್ಲಿ ಇಲ್ಲ. ಮೋದಿ ಅವರು ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸುತ್ತಾರೆ ಮತ್ತು ಮುಂದಿನ ಬಾರಿಯೂ ಅವರೇ ಪ್ರಧಾನಿಯಾಗಿ ಮುಂದುವರೆಯುತ್ತಾರೆ. ಈ ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ ಎಂದರು.
ಹಾಗಾದರೆ, ಕಳೆದ ವರುಷ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಈ ಮಾತು ಏಕಿರಲಿಲ್ಲ. ಕೆ.ಎಸ್. ಈಶ್ವರಪ್ಪ, ಜಗದೀಶ್ ಶೆಟ್ಟರ್, ಸವದಿಯಂತಹ ನಾಯಕರನ್ನು ಬದಿಗಿಟ್ಟಿದ್ದೇಕೆ? ಅಲ್ಲೊಂದು ನ್ಯಾಯ, ಇಲ್ಲೊಂದಾ?
ಈಶ್ವರಪ್ಪ ನಿಮ್ಎ ಕೌಂಟ್ ಲೆಸ್ಸಾ ಎಂದು ಈಶ್ವರಪ್ಪ ಅಭಿಮಾನಿಗಳು, ಬಿಜೆಪಿಯ ಮುಖಂಡರುಗಳು ಕೇಳುತ್ತಿದ್ದಾರೆ. ಆರು ಬಂದ್ರೆ ಅತ್ತೆ ಕಡೆ ಸಂಸ್ಕೃತಿನಾ ಎಂದು ಪ್ರಶ್ನಿಸಿದ್ದಾರೆ.