ಬೆಂಗಳೂರು,ಜ.11 :
ರಾಜ್ಯದ ಜನತೆಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಕಳೆದ ಎರಡು ತಿಂಗಳಲ್ಲಿ ಎರಡು ಬಾರಿ ವಿದ್ಯುತ್ ಶುಲ್ಕ ಹೆಚ್ಚಳ ಮಾಡಿರುವ ಎಸ್ಕಾಂಗಳು ಏಪ್ರಿಲ್ 1 ರಿಂದ ಅನ್ವಯವಾಗುವಂತೆ ಮತ್ತೊಮ್ಮೆ ವಿದ್ಯುತ್ ಶುಲ್ಕ ಹೆಚ್ಚಳ ಮಾಡುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಮನವಿ ಮಾಡಿದ್ದು, ಪ್ರತಿ ಯೂನಿಟ್ ಗೆ 1.35 ರೂ. ಹೆಚ್ಚಳವಾಗುವ ಸಾಧ್ಯತೆ ಇದೆ.
ಕೆಇಆರ್ ಸಿ ಪ್ರಸ್ತಾವನೆ ವಿರುದ್ಧ ಆಕ್ಷೇಪಣೆ ಸಲ್ಲಿಸಲು 30 ದಿನಗಳ ಗಡುವು ನೀಡಿದ್ದು, ಆಕ್ಷೇಪಣೆಗಳನ್ನು ಪರಿಶೀಲಿಸಿ ಬಹುತೇಕ ಫೆಬ್ರವರಿ ತಿಂಗಳಲ್ಲಿ 2021 ರ ಏಪ್ರಿಲ್ 1 ರಿಂದ ಅನ್ವಯವಾಗುವಂತೆ ಮತ್ತೊಮ್ಮೆ ವಿದ್ಯುತ್ ದರ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಮೆಸ್ಕಾಂ ಪ್ರತಿ ಯೂನಿಟ್ ಗೆ 1.69 ರೂ. ಬೆಸ್ಕಾಂ ಪ್ರತಿ ಯೂನಿಟ್ ಗೆ 1.39 ರೂ. ಹೆಸ್ಕಾಂ ಪ್ರತಿ ಯೂನಿಟ್ ಗೆ 83 ಪೈಸೆ, ಜಿಸ್ಕಾಂ 1.31 ರೂ. ಪ್ರತಿ ಯೂನಿಟ್ ಗೆ ವಿದ್ಯುತ್ ಶುಲ್ಕ ಹೆಚ್ಚಳ ಮಾಡುವಂತೆ ಕೆಇಆರ್ ಸಿಗೆ ಪ್ರಸ್ತಾವನೆ ಸಲ್ಲಿಸಿವೆ ಎಂದು ಹೇಳಲಾಗುತ್ತಿದೆ.

By admin

ನಿಮ್ಮದೊಂದು ಉತ್ತರ

error: Content is protected !!