ಶಿವಮೊಗ್ಗ,ಮೇ.೨೪
ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರದಿಂದ ನಡೆಯುತ್ತಿರುವ ರಾಜ್ಯದ ವಿಧಾನ ಪರಿತ್ನ ೪ ಸ್ಥಾನಗಳ ಚುನಾವಣೆಗೆ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ದ ಬಂಡಾಯವಾಗಿ ಸ್ಪರ್ಧಿಸಿರುವ ಐವರನ್ನು ಗುರುವಾರ ಉಚ್ಛಾಟಿಸಿ ಕೆಪಿಸಿಸಿ ಆದೇಶ ಹೊರಡಿಸಿದೆ.

ಉಚ್ಛಾಟಿತರೆಂದರೆ- ನೈಋತ್ಯ ಪದವೀಧರ ಕ್ಷೇತ್ರದಿಂದ ಎಸ್ ಪಿ ದಿನೇಶ್, ಬೆಂಗಳೂರು ಪದವೀಧರ ಕ್ಷೇತ್ರದಿಂದ ಫರ್ಡಿನಾಂಡ್ ಲಾರೆನ್ಸ್, ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಚಿಕ್ಕಮಗಳೂರಿನ


ಬಿ. ಆರ್ ನಂಜೇಶ್, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಹೊಳಲ್ಕೆರೆಯ ಲೋಕೇಶ್ ತಾಳಿಕಟ್ಟೆ ಮತ್ತು ಬೆಂಗಳೂರಿನ ಬ್ಯಾಟರಾಯನಪುರದ ವಿನೋದ್ ಶಿವರಾಜ್. ಬಂಡಾಯವಾಗಿ ಸ್ಪರ್ಧಿಸಿ ಕಾಂಗ್ರೆಸ್ ಪಕ್ಷದ ಶಿಸ್ತನ್ನು

ಉಲ್ಲಂಘಿಸಿದ್ದಾರೆ. ಇದು ಪಕ್ಷ ವಿರೋಧಿ ಚಟುವಟಿಕೆ ಯಾಗಿರುವುದರಿಂದ ಕೆಪಿಸಿಸಿ ಅಧ್ಯಕ್ಷರ ಆದೇಶದ ಮೇರೆಗೆ ಆರು ವರ್ಷಗಳ ಕಾಲ ಇವರನ್ನು ಉಚ್ಛಾಟಿಸಲಾಗಿದೆ.