ಸಾಗರ, ಜೂ.೦೧:
ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ ೨೦೬ರ ಹೊಸ ಗುಂದ ತಿರುವಿನಲ್ಲಿ ಅಪಘಾತದಿಂದ ಗಾಯಗೊಂಡಿದ್ದ ಕುಟುಂಬಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಪ್ರಥಮ ಚಿಕಿತ್ಸೆ ನೀಡಿ ತಮ್ಮ ವಾಹನದಲ್ಲಿ ಸಾಗರ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಿದ ಘಟನೆ ನಡೆದಿದೆ.
ಶಾಸಕ ಗೋಪಾಲಕೃಷ್ಣ ಬೇಳೂರು ವಿಧಾನ ಪರಿಷತ್ ಚುನಾವಣೆ ಪ್ರಚಾರನಿಮಿತ್ತ ಶುಕ್ರವಾರ ಸಾಗರದಿಂದ ಆನಂದಪುರಂ ಕಡೆ ಹೋಗುತ್ತಿದ್ದರು. ಮಾರ್ಗಮಧ್ಯೆ
ಹೊಸಗುಂದ ಬಳಿ ಸಿಗಂದೂರು ಚೌಡೇಶ್ವರಿ ದರ್ಶನಕ್ಕೆ ಬರುತ್ತಿದ್ದ ಪತ್ನಿಪತ್ನಿಯರಿಬ್ಬರು ಬೈಕ್ ಅಪಘಾತವಾಗಿ ಗಾಯಗೊಂಡು ಸಹಾಯಕ್ಕಾಗಿ ಯಾಚಿಸುತ್ತಿದ್ದರು.
ಇದೇ ಮಾರ್ಗದಲ್ಲಿ ಬರುತ್ತಿದ್ದ ಶಾಸಕ ಬೇಳೂರು ತಕ್ಷಣ ತಮ್ಮ ವಾಹನ ನಿಲ್ಲಿಸಿ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿ ಸಾಂತ್ವಾನ ಹೇಳಿ ತಮ್ಮದೆ ವಾಹನದಲ್ಲಿ
ಉಪವಿಭಾಗೀಯ ಆಸ್ಪತ್ರೆಗೆ ಕರೆದು ಕೊಂಡು ಬಂದು ಪ್ರಥಮ ಚಿಕಿತ್ಸೆ ಕೊಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.