ನೈರುತ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಾ.ಧನಂಜಯ ಸರ್ಜಿ ಅವರು ಪ್ರಚಂಡ ಗೆಲುವು ಸಾಧಿಸುತ್ತಿದ್ದಂತೆ ಮೈಸೂರಿನ ಮಹಾರಾಣಿ ಕಾಲೇಜು
ಎದುರು ನಿನ್ನೆ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಭುಜದ ಮೇಲೆ ಹೊತ್ತು ಸಂಭ್ರಮಿಸಿದರು. ಈ ವೇಳೆ ನೂರಾರು
ಕಾರ್ಯಕರ್ತರು ಜಮಾಯಿಸಿ ಜಯಘೋಷ ಮೊಳಗಿಸಿದರು. ಬಿಜೆಪಿ, ಜೆಡಿಎಸ್ ಪಕ್ಷದ ಹಿರಿಯ ಮುಖಂಡರು, ಕಾರ್ಯಕರ್ತರು, ಹಿತೈಷಿಗಳು, ಅಭಿಮಾನಿಗಳು ಪಾಲ್ಗೊಂಡಿದ್ದರು