ಶಿವಮೊಗ್ಗ: ಉತ್ತಮ ಜೀವನ ಮತ್ತು ವ್ಯಕ್ತಿತ್ವಕ್ಕೆ ಆರೋಗ್ಯವೆಂಬುದು ಅತ್ಯವಶ್ಯಕ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್‌.ನಾಗರಾಜ ಅಭಿಪ್ರಾಯಪಟ್ಟರು.

ನಗರದ ನ್ಯಾಷನಲ್‌ ಪಬ್ಲಿಕ್‌ ಶಾಲೆಯಲ್ಲಿ ಸುಬ್ಬಯ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ್ದ ಶಾಲೆಯ ಸಿಬ್ಬಂದಿ ವರ್ಗಗಳ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಶಾಲೆಗಳಲ್ಲಿ ಸಂಪತ್ತಿಗಿಂತ ಆರೋಗ್ಯವೇ ಮುಖ್ಯ ಎಂದು ಹೇಳಿಕೊಡುತ್ತಾರೆ. ಅದರೇ ಅದನ್ನು ಕಲಿಸುವ ಶಿಕ್ಷಕರೇ ಅಧಿಕ ಒತ್ತಡದಿಂದ ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ. ಇಂದಿನ ಆಧುನಿಕ ಜೀವನ ಪದ್ದತಿಗಳು, ಚಿಕ್ಕ ವಯಸ್ಸಿನಲ್ಲಿಯೇ ಅನೇಕ ರೋಗಗಳಿಗೆ ತುತ್ತಾಗುವಂತೆ ಮಾಡುತ್ತಿರುವುದು ವಿಷಾಧನೀಯ ಎಂದು ಹೇಳಿದರು.

ಸುಬ್ಬಯ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ.ಲತಾ ಮಾತನಾಡಿ, ಮನೆ ಕೆಲಸದ ಜೊತೆಗೆ ಹೊರಗಡೆಯು ದುಡಿಯುವ ಮಹಿಳೆಯರು ಬಹುತೇಕ ಸಂದರ್ಭಗಳಲ್ಲಿ

ತಮ್ಮ ಆರೋಗ್ಯದ ಮೇಲೆ ನಿರ್ಲಕ್ಷ ವಹಿಸುತ್ತಾರೆ. ಥೈರಾಯಿಡ್‌ ನಂತಹ ಕಾಯಿಲೆಗಳನ್ನು ಉಪೇಕ್ಷಿಸಿ ನೋವನ್ನು ಅನುಭವಿಸುತ್ತಿರುತ್ತಾರೆ. ಇನ್ನಾದರೂ ಆರೋಗ್ಯ ಬಗ್ಗೆ ಜಾಗೃತಿ ವಹಿಸಿ, ಯಾವುದೇ ಸಾಧನೆಗಳಿಗೆ ಆರೋಗ್ಯವೆಂಬುದು ಬಹುಮುಖ್ಯ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ನ್ಯಾಷನಲ್‌ ಪಬ್ಲಿಕ್‌ ಶಾಲೆಯ ಪ್ರಾಂಶುಪಾಲರಾದ ನವೀನ ಪಾಯಸ್‌ ಅಧ್ಯಕ್ಷತೆ ವಹಿಸಿದ್ದರು. ಸುಬ್ಬಯ್ಯ ವೈದ್ಯಕೀಯ ಕಾಲೇಜಿನ ಕಮ್ಯುನಿಟಿ ಮೆಡಿಸಿನ್‌ ವಿಭಾಗದ ಮುಖ್ಯಸ್ಥರಾದ ಡಾ.ಬಾಲು, ವೈದ್ಯರಾದ ಡಾ.ಅನುಪಮ, ಡಾ.ಭಾಗ್ಯಶ್ರೀ, ಡಾ.ಭವ್ಯ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಇದೇ ವೇಳೆ ಶಾಲೆಯ ಸಿಬ್ಬಂದಿ ವರ್ಗಕ್ಕೆ ಸುಬ್ಬಯ್ಯ ಹೆಲ್ತ ಕಾರ್ಡ್‌ ವಿತರಿಸಲಾಯಿತು.

By admin

ನಿಮ್ಮದೊಂದು ಉತ್ತರ

error: Content is protected !!