ಶಿವಮೊಗ್ಗ, ಜೂನ್ ೨೯ ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯು ಸರ್ಕಾರದ ಸ್ವಾಯತ್ತ ಸಂಸ್ಥೆಯಾಗಿದ್ದು,
ಗುಣಮಟ್ಟದ ಕ್ಯಾನ್ಸರ್ ಚಿಕಿತ್ಸೆ ಆಸ್ಪತ್ರೆಯಾಗಿದೆ. ಈ ಆಸ್ಪತ್ರೆಯಲ್ಲಿ ಕ್ಯಾನ್ಸರ್‌ಗೆ ಸಂಬಂಧಿಸಿದಂತೆ ಪರಿಶಿಷ್ಟ ಪಂಗಡದ
ಬಡತನ ರೇಖೆಗಿಂತ (ಬಿಪಿಎಲ್) ಕೆಳಗಿರುವ ಜನರಿಗೆ ಉಚಿತ ಚಿಕಿತ್ಸೆ ಹಾಗೂ ಬಡತನ
ರೇಖೆಗಿಂತ ಮೇಲಿರುವ (ಎಪಿಎಲ್) ಜನರಿಗೆ ಅತಿ ಕಡಿಮೆ ದರದಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ
ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ, ಬೆಂಗಳೂರು ಇವರನ್ನು ಸಂಪರ್ಕಿಸುವುದು.