ಶಿವಮೊಗ್ಗ, ಜು.04:
ಇಲ್ಲಿನ ಮಾಚೇನಹಳ್ಳಿ ಇಂಡಸ್ಟ್ರೀಸ್ ಅಸೋಸಿಯೇಷನ್ ಅಧ್ಯಕ್ಷರು ಹಾಗೂ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನಿರ್ದೇಶಕರು ಮತ್ತು ಮೆಕ್ ವೈರ್ ಇಂಡಸ್ಟ್ರೀಸ್ ನ ಪಾಲುದಾರರಾದ ಎಂ ಎ ರಮೇಶ್ ಹೆಗಡೆಯವರು ಕಾಸಿಯ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಪ್ರತಿಷ್ಠಿತ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಸಂಘ (ಕಾಸಿಯ)ದ ಪದಾಧಿಕಾರಿಗಳ ಚುನಾವಣೆಯಲ್ಲಿ ಸ್ಪರ್ಧಿಸಿ ಸಂಸ್ಥೆಗೆ ಕೌನ್ಸಿಲ್ ನಿರ್ದೇಶಕರಾಗಿ ಆಗಿ ಆಯ್ಕೆಯಾಗಿದ್ದಾರೆ.
ಸದಾ ಸಾಮಾಜಿಕ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿರುವ ರಮೇಶ್ ಹೆಗಡೆ ಅವರು ಈಗಾಗಲೇ ವಾಣಿಜ್ಯ ಹಾಗೂ ಕೈಗಾರಿಕಾ ಸಂಘ ಸಂಸ್ಥೆಗಳ ಜೊತೆ ಸಾಮಾಜಿಕ ಮತ್ತು ಆಧ್ಯಾತ್ಮಿಕ ಸಂಘಗಳಲ್ಲಿಯೂ ತೊಡಗಿರುವುದು ವಿಶೇಷ.
ಇವರಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಏನ್ ಗೋಪಿನಾಥ್, ಉಪಾಧ್ಯಕ್ಷ ಬಿ. ಗೋಪಿನಾಥ್, ಕಾರ್ಯದರ್ಶಿ ವಸಂತ ಹೋಬಳಿದಾರ್. ಸಹ ಕಾರ್ಯದರ್ಶಿ ಜಿ. ವಿಜಯಕುಮಾರ್, ಖಜಾಂಚಿ ಎಂ ರಾಜು, ಕಾಸಿಯಾ ಸದಸ್ಯ ಮತದಾರರಾದ ಗಣೇಶ್ ಎಂ ಅಂಗಡಿ. ಪ್ರದೀಪ್ ವಿ ಎಲಿ. ಹಾಗೂ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಾಜಿ ಅಧ್ಯಕ್ಷರುಗಳು ನಿರ್ದೇಶಕರು ಮಾಚೇನಹಳ್ಳಿ ಕೈಗಾರಿಕಾ ಸಂಘದ ಎಲ್ಲ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.